ಸಿನಿಮಾ ಸುದ್ದಿ

ಲಾಪತಾ ಲೇಡೀಸ್‌ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!

ಅಮೃತಾ ಅಪಾರ್ಟ್ ಮೆಂಟ್ಸ್, ದಿ ಲಾಸ್ಟ್ ಬಸ್ ಮತ್ತು ದಿ ಜಡ್ಜ್ ಮೆಂಟ್ ಚಿತ್ರದ ನಿರ್ದೇಶಕ ಗುರುರಾಜ್ ಕುಲಕರ್ಣಿ (ನಾಡಗೌಡ) ಮುಂದಿನ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.

ಲಾಪತಾ ಲೇಡೀಸ್‌ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!
ಸೋನು ಆನಂದ್, ಗುರುರಾಜ್ ಕುಲಕರ್ಣಿ
Published On :

ಅಮೃತಾ ಅಪಾರ್ಟ್ ಮೆಂಟ್ಸ್, ದಿ ಲಾಸ್ಟ್ ಬಸ್ ಮತ್ತು ದಿ ಜಡ್ಜ್ ಮೆಂಟ್ ಚಿತ್ರದ ನಿರ್ದೇಶಕ ಗುರುರಾಜ್ ಕುಲಕರ್ಣಿ (ನಾಡಗೌಡ) ಮುಂದಿನ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಇದು ಥ್ರೀಲ್ಲರ್ ನೊಂದಿಗೆ ಭಾವನಾತ್ಮಕ ಕಥಾ ಹಂದರವುಳ್ಳ ಚಿತ್ರ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.

ದಿ ಜಡ್ಜ್‌ಮೆಂಟ್‌ ಚಿತ್ರಕ್ಕೆ ಮೆಚ್ಚುಗೆಯ ವಿಮರ್ಶೆ ಬಂದಿತ್ತು. ಇದರಿಂದ ಗುರುರಾಜ್ ತಮ್ಮ ಸಿನಿಮಾ ಆದ್ಯತೆಗಳನ್ನು ಅರ್ಥ ಮಾಡಿಕೊಂಡ ಪ್ರೇಕ್ಷಕರೊಂದಿಗೆ ಕನೆಕ್ಟ್ ಆಗಲು ಉತ್ಸುಕರಾಗಿದ್ದಾರೆ.

'ದಿ ಜಡ್ಜ್ ಮೆಂಟ್' ನಂತರ ಅಂತಹ ಪ್ರೇಕ್ಷಕರನ್ನು ತಲುಪಲು ಮತ್ತು ಅವರು ಯಾವ ರೀತಿ ಸಿನಿಮಾ ನೋಡಲು ಆಸಕ್ತಿ ಹೊಂದಿದ್ದಾರೆ ಎಂಬುದನ್ನು ತಿಳಿಯಲು ಬಯಸುತ್ತೇನೆ. ನಾನು ಸಮೀಕ್ಷೆ ನಡೆಸಿದ್ದು, ಬೀದಿಗಳಲ್ಲಿ ಜನರೊಂದಿಗೆ ಮಾತನಾಡಿದ್ದೇನೆ. ಅವರು ಕೊನೆಗೆ ಥ್ರಿಲ್ಲರ್‌ ಕಥೆಗೆ ಮಣೆ ಹಾಕಿದರು. ಹೆಚ್ಚಿನ ಜನರನ್ನು ತಲುಪುವಂತಹ ಚಿತ್ರ ಮಾಡುವುದು ನನ್ನ ಗುರಿಯಾಗಿದೆ ಎಂದು ಅವರು ವಿವರಿಸಿದರು.

ಕುತೂಹಲಕಾರಿ ವಿಷಯ ಏನೆಂದರೆ, ಇನ್ನೂ ಹೆಸರಿಡದ ಚಿತ್ರವನ್ನು ಪ್ಯಾನ್- ಇಂಡಿಯಾ ಮಟ್ಟದಲ್ಲಿ ತಯಾರಿಸಲು ಗುರುರಾಜ್ ಯೋಜಿಸಿದ್ದಾರೆ. ವಿವಿಧ ಭಾಷೆಗಳ ಪ್ರತಿಭಾವಂತರೊಂದಿಗೆ ಆ ನೆಲಕ್ಕೆ ತಕ್ಕಂತೆ ಚಿತ್ರ ಮಾಡಲು ಎದುರು ನೋಡುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಿರಣ್ ರಾವ್ ನಿರ್ದೇಶನದ ಲಾಪತಾ ಲೇಡೀಸ್‌ನ ಸಂಭಾಷಣೆಗಾರ ಸೋನು ಆನಂದ್ ಸೇರಿದಂತೆ ವೈವಿಧ್ಯಮಯ ಬರಹಗಾರರ ತಂಡವನ್ನು ಅವರು ಒಟ್ಟುಗೂಡಿಸಿದ್ದಾರೆ.

'ಲಾಪತಾ ಲೇಡೀಸ್' ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ 97 ನೇ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವ ಭಾರತದ ಚಿತ್ರವಾಗಿದೆ. ಕನ್ನಡ ಕಥೆಗಾರರೊಂದಿಗೆ ಪ್ಯಾನ್- ಇಂಡಿಯಾ ಚಿತ್ರಗಳ ಬಗ್ಗೆ ಮಾತನಾಡಿದ್ದೇವೆ. ಸೋನು ಆನಂದ್, ತನ್ನ ನೆಲದ ಅನುಭವವನ್ನು ಕಥೆಯಲ್ಲಿ ಸೇರಿಸಲಿದ್ದಾರೆ ಎಂದು ಗುರುರಾಜ್ ಹೇಳಿದರು. ನನಗೆ ಸಾಮಾನ್ಯ ಸ್ನೇಹಿತನ ಮೂಲಕ ಸೋನು ಪರಿಚಯವಾಯಿತು. ಅವರಿನ್ನೂ ಯುವಕರಾಗಿದ್ದು, ಹೊಸ ಪರಿಕಲ್ಪನೆ ಒದಗಿಸುತ್ತಾರೆ ಎಂದು ಭಾವಿಸಿದ್ದೇನೆ. ಸದ್ಯ ಚಿತ್ರ ಕಥೆ ರಚನೆ ಪ್ರಕ್ರಿಯೆಯಲ್ಲಿದೆ ಮತ್ತು ಗುರುರಾಜ್ ಸಂಭಾಷಣೆಗಳ ಮೇಲೆ ಕೇಂದ್ರೀಕರಿಸುತ್ತಿದ್ದಾರೆ. ಹಿಂದಿ, ಮರಾಠಿ ಮತ್ತು ಭೋಜ್‌ಪುರಿಯಲ್ಲಿ ಸೋನು ಹೆಚ್ಚಿನ ಪರಿಣತಿ ಹೊಂದಿದ್ದಾರೆ ಎಂದು ಅವರು ತಿಳಿಸಿದರು.

ಗುರುರಾಜ್ ಕನ್ನಡ ಆವೃತ್ತಿಗೆ ಸಂಭಾಷಣೆ ಬರೆಯಲು ಉದ್ದೇಶಿಸಿದ್ದಾರೆ. ಅನುಭವಿ ಬರಹಗಾರರೊಂದಿಗೆ ಸಮರ್ಥವಾಗಿ ಸಹಕರಿಸುತ್ತಾರೆ ಮತ್ತು ತಮಿಳು, ತೆಲುಗು ಮತ್ತು ಮಲಯಾಳಂ ಉದ್ಯಮಗಳಿಂದ ಚಿತ್ರ ಕಥೆಗಾರರನ್ನು ಹುಡುಕುತ್ತಿದ್ದಾರೆ. ಚಿತ್ರಕಥೆ ಸಿದ್ಧವಾಗಿದೆ ಮತ್ತು ಮೊದಲ ಡ್ರಾಫ್ಟ್ ಸಿದ್ಧಪಡಿಸುತ್ತಿರುವ ಸೋನು ಅವರೊಂದಿಗೆ ನಾನು ಸುದೀರ್ಘವಾಗಿ ಚರ್ಚಿಸಿದ್ದೇನೆ. ಇತ್ತೀಚೆಗೆ ಅವರು ಬೆಂಗಳೂರಿನಲ್ಲಿದ್ದಾಗಅಲ್ಪಾವಧಿಯಲ್ಲಿ ಕನ್ನಡದಲ್ಲಿ ಕಿರುಚಿತ್ರ ಮಾಡಿದರು. ಅವರು ಧೀರ್ಘಾವಧಿ ಸಹಯೋಗದಲ್ಲಿ ಚಿತ್ರ ಮಾಡಲು ಉತ್ಸುಕರಾಗಿದ್ದಾರೆ ಎಂದು ಗುರುರಾಜ್ ತಿಳಿಸಿದರು.

ತಾರಾಬಳಗದ ಪ್ರಕ್ರಿಯೆ ಮುಂದುವರೆದಿದ್ದು, ಗುರುರಾಜ್ ಅವರೇ ತಮ್ಮ ಬ್ಯಾನರ್ G9 ಕಮ್ಯುನಿಕೇಷನ್ ಮೀಡಿಯಾ ಮತ್ತು ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಎಲ್ಲಾ ಭಾಷೆಗಳಲ್ಲಿ ಹೆಚ್ಚಿನ ಪ್ರೇಕ್ಷಕರನ್ನು ಹೊಂದಿರುವ ಕಲಾವಿದರನ್ನು ಆಯ್ಕೆ ಮಾಡಲು ಒಲವು ತೋರಿದ್ದಾರೆ. ತಾರಾಬಳಗ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಶೀಘ್ರದಲ್ಲಿಯೇ ಘೋಷಿಸಲಿದ್ದು, ಸದ್ಯ ಗ್ರೌಂಡ್ ವರ್ಕ್ ನತ್ತ ಗಮನ ಕೇಂದ್ರೀಕರಿಸಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.