ಸಿನಿಮಾ ಸುದ್ದಿ

ಅಂಬಾಲಿ ಭಾರತಿ ಅಭಿನಯದ 'ನಾ ನಿನ್ನ ಬಿಡಲಾರೆ' ಚಿತ್ರದ ಟೀಸರ್ ಬಿಡುಗಡೆ

ಚಿತ್ರದ ಟೀಸರ್ ಅನ್ನು ನಟ ಶರಣ್ ಬಿಡುಗಡೆ ಮಾಡಿದ್ದು, ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ.

ಅಂಬಾಲಿ ಭಾರತಿ ಅಭಿನಯದ 'ನಾ ನಿನ್ನ ಬಿಡಲಾರೆ' ಚಿತ್ರದ ಟೀಸರ್ ಬಿಡುಗಡೆ
ಚಿತ್ರ ತಂಡದೊಂದಿಗೆ ನಟ ಶರಣ್
Published On :

ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ "ನಾ ನಿನ್ನ ಬಿಡಲಾರೆ" ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.

ಚಿತ್ರದ ಟೀಸರ್ ಅನ್ನು ನಟ ಶರಣ್ ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ, ನಿರ್ಮಾಪಕಿ ಭಾರತಿ ರವರ ಶ್ರಮಕ್ಕೆ ತಕ್ಕ ಚಿತ್ರ ಇದಾಗಿದೆ. ಒಬ್ಬ ಹೆಣ್ಣು ಮಗಳು ಇಷ್ಟು ಶ್ರಮಪಟ್ಟು ಸಿನಿಮಾ ಮಾಡಿದ್ದಾರೆ ಎಂದರೆ ಇವರು ಪ್ರಥಮ ಪ್ರಯತ್ನದಲ್ಲಿ ಗೆದ್ದಂತಾಗಿದೆ. ಅದೇ ರೀತಿ ನಿರ್ದೇಶಕರು ಮೊದಲ ಪ್ರಯತ್ನವಾಗಿ ಒಳ್ಳೆಯ ಸಿನಿಮಾ ಮಾಡಿದ್ದಾರೆ ಎನಿಸುತ್ತಿದೆ. ನನ್ನ ಪೆವರೇಟ್ ಜಾನರ್ ಹಾರರ್. ನಾನು ನಾಲ್ಕೈದು ವರ್ಷದವ ಇದ್ದಾಗ ಅನಂತ್ ನಾಗ್, ಲಕ್ಷ್ಮೀ ಅವರ 'ನಾ ನಿನ್ನ ಬಿಡಲಾರೆ' ಸಿನಿಮಾ ರೀ-ರಿಲೀಸ್ ಆಗಿತ್ತು.

ಆಗ ನಮ್ಮ ತಂದೆ ಆ ಚಿತ್ರ ತೋರಿಸಿದ್ದರು. ನಾನು ಎಲ್ಲಾ ಭಾಷೆಯ ದೆವ್ವಗಳ ಸಿನಿಮಾಗಳನ್ನು ತಪ್ಪದೆ ನೋಡುತ್ತೇನೆ. ಕಳೆದ ವರ್ಷ ಫೆಬ್ರವರಿಯಿಂದ ಈ ತಂಡ ನನ್ನ ಪಾಲೋ ಮಾಡುತ್ತಾ ಬಂದಿದೆ. ಇವರ ಪ್ರಯತ್ನ ನನ್ನನ್ನು ಈ ವೇದಿಕೆಗೆ ಬರುವಂತೆ ಮಾಡಿದೆ. ಮೊದಲ ಪ್ರಯತ್ನದಲ್ಲೇ ಚಾಲೆಂಜ್ ಆಗಿ ಚಿತ್ರ ಮಾಡಿದ್ದಾರೆ. ಒಳ್ಳೆಯ ಸಿನಿಮಾಗಳನ್ನು ನಮ್ಮ ಕನ್ನಡಿಗರು ಕೈ ಬಿಟ್ಟಿಲ್ಲ. ಟೀಸರ್ ತುಂಬಾ ಖುಷಿ ಕೊಟ್ಟಿದೆ. ಇಡೀ ಚಿತ್ರತಂಡಕ್ಕೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು.

ನಾಯಕಿ ಅಂಬಾಲಿ ಭಾರತಿ ಅವರು ಮಾತನಾಡಿ, ನಾನು ಮ‌ೂಲತಃ ಗುಲ್ಬರ್ಗ ಹುಡುಗಿ. ನನಗೂ ರಂಗಭೂಮಿ ನಂಟು ಇದೆ. ಒಂದಿಷ್ಟು ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಮಾಡಿದ್ದೇನೆ. ನಮ್ಮ ಈ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದ ನಟ ಶರಣ್ ಸರ್ ಗೆ ತುಂಬಾ ಧನ್ಯವಾದಗಳು ತಿಳಿಸುತ್ತೇನೆ. ನಾನು ಅವರ ಅಭಿಮಾನಿ. ಅವರ ಮೂಲಕವೇ ನಮ್ಮ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿಸಬೇಕೆಂಬು ಉದ್ದೇಶದಿಂದ ಕಾದು ಬಿಡುಗಡೆ ಮಾಡಿಸಿದ್ದೇವೆಂದು ತಿಳಿಸಿದರು.

ಚಿತ್ರದಲ್ಲಿ ಕೆ.ಎಸ್ ಶ್ರೀಧರ್, ಶ್ರೀನಿವಾಸ ಪ್ರಭು, ಹರಿಣಿ ಶ್ರೀಕಾಂತ್, ಸೀರುಂಡೆ ರಘು, ಮಹಾಂತೇಶ್, ಲಕ್ಷ್ಮಿ ಸಿದ್ದಯ್ಯ, ಮಂಜುಳಾ ರೆಡ್ಡಿ ಮತ್ತು ನಾಗರಾಜ್ ರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಸಾಹಸ ನಿರ್ದೇಶಕರಾಗಿ ಡಿಫರೆಂಟ್ ಡ್ಯಾನಿ, ಎಂ.ಎಸ್. ತ್ಯಾಗರಾಜ್ ಸಂಗೀತ ನಿರ್ದೇಶಕರಾಗಿ ಹಾಗೂ ಛಾಯಾಗ್ರಾಹಕರಾಗಿ ವೀರೇಶ್ ಅವರು ತಮ್ಮ ಕೈಚಳಕ ತೋರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.