ನಟ ಯಶ್ರನ್ನು ನೋಡುವ ಆತುರದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಅಭಿಮಾನಿ ಸ್ಥಿತಿ ಗಂಭೀರ!
ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್ ಕಟ್ಟುವಾಗ ಕರೆಂಟ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಗದಗ: ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್ ಕಟ್ಟುವಾಗ ಕರೆಂಟ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ.
ಗದಗಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದರು. ಈ ವೇಳೆ ಯಶ್ ನೋಡಲು ಅಭಿಮಾನಿಯೊಬ್ಬ ವೇಗವಾಗಿ ಬಂದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದೆ.
ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ 32 ವರ್ಷದ ನಿಖಿಲ್ ಯಶ್ ರನ್ನು ನೋಡುವ ಹಂಬಲದಲ್ಲಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬ ಅಂದರೆ ಅಸಹ್ಯಪಡುವಂತಾಗಿದೆ: ನಟ ಯಶ್
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕಳೆದ ರಾತ್ರಿ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ನಿಂದ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


