ಹಸೆಮಣೆ ಏರಲು ಆ್ಯಂಕರ್ ಅನುಶ್ರೀ ಸಜ್ಜು: ಹುಡುಗನ ಬಗ್ಗೆ ಹೇಳಿದ್ದೇನು?
ಅನುಶ್ರೀ ಅವರ ಮದುವೆ ಕುರಿತು ಅನೇಕ ಕಾರ್ಯಕ್ರಮಗಳಲ್ಲಿ ಅವರ ಬಳಿ ಪ್ರಶ್ನೆ ಕೇಳಲಾಗುತ್ತಿತ್ತು. ಈ ವೇಳೆ ನಟಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆಯೇ ಮಾತನಾಡುತ್ತಿದ್ದರು.

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಹಸೆಮಣೆ ಏರಲು ಸಜ್ಜಾಗಿದ್ದು, ಹುಡುಗನ ಕುರಿತು ಮಾತನಾಡಿದ್ದಾರೆ.
ಸೋಷಿಯಲ್ ಮಿಡಿಯಾ ಲೈವ್ಗೆ ಬಂದಿದ್ದ ಅನುಶ್ರೀ ಅವರಿಗೆ ನಟಿ ಮಲೈಕಾ ವಸುಪಾಲ್ ಹಾಗೂ ನಟ ನಾಗಭೂಷಣ್ ಅವರು ನಿಮ್ಮ ಹುಡುಗ ಹೇಗಿರಬೇಕು? ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಇದೇ 2025ರ ಅಂತ್ಯದೊಳಗೆ ಮದುವೆಯಾಗುವುದಾಗಿ ಅನುಶ್ರೀ ಹೇಳಿದ್ದಾರೆ.
ಅನುಶ್ರೀ ಮಾತಿಗೆ ಮಲೈಕಾ ವಸುಪಾಲ್ ಮತ್ತು ನಾಗಭೂಷಣ್ ಹೌದಾ ಎಂದು ಮತ್ತೊಮ್ಮೆ ಕೇಳಿದ್ದು, ಹೌದು. ಈ ವರ್ಷವೇ ಮದುವೆ ಆಗುತ್ತೀನಿ ಎಂದು ಅಧಿಕೃತವಾಗಿ ಹೇಳಿದ್ದಾರೆ.
ಇದೇ ವೇಳೆ ತಮ್ಮ ಹುಡುಗ ಹೇಗಿರಬೇಕೆಂದೂ ಮನಬಿಚ್ಚಿ ಮಾತನಾಡಿದ್ದಾರೆ. ನನ್ನ ಹುಡುಗ ತುಂಬ ರೆಸ್ಪಾನ್ಸಿಬಲ್ ಆಗಿರಬೇಕು. ನನ್ನ ಪರವಾಗಿ ಅಲ್ಲ ಅವನ ಲೈಫ್ ಪರವಾಗಿ ರೆಸ್ಪಾನ್ಸಿಬಲ್ ಆಗಿದ್ರೆ ಸಾಕು. ಅವನು ಬದುಕಬೇಕು, ನನ್ನನ್ನು ಬದುಕೋಕೆ ಬಿಡಬೇಕು ಎಂದು ತಿಳಿಸಿದ್ದಾರೆ.
ಅನುಶ್ರೀ ಅವರ ಮದುವೆ ಕುರಿತು ಅನೇಕ ಕಾರ್ಯಕ್ರಮಗಳಲ್ಲಿ ಅವರ ಬಳಿ ಪ್ರಶ್ನೆ ಕೇಳಲಾಗುತ್ತಿತ್ತು. ಈ ವೇಳೆ ನಟಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆಯೇ ಮಾತನಾಡುತ್ತಿದ್ದರು. ಇದೀಗ ವಿವಾಹ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


