ಮಾನಸಿಕ ಖಿನ್ನತೆ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ
ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.

ಬೆಂಗಳೂರು: ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ (31) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಂದ್ರಶೇಖರ್, ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು. ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.
ಆತನ ಪತ್ನಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಚಂದ್ರಶೇಖರ್ ತಾಯಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡಿದ್ದ ಈತ ಜನರನ್ನು ರಂಜಿಸಿ ಗಮನ ಸೆಳೆದಿದ್ದ. ಕೆಲ ಧಾರಾವಾಹಿಗಳಲ್ಲಿಯೂ ಸಹಪಾತ್ರಗಳಲ್ಲಿ ನಟಿಸಿದ್ದರು. ಬಳಿಕ ಹೆಚ್ಚಿನ ಅವಕಾಶಗಳು ಸಿಗದೆ, ಊರಿನ ಕಡೆ ಆಗಮಿಸಿದ್ದ ಚಂದ್ರಶೇಖರ್, ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ರಂಗಭೂಮಿ ಪ್ರತಿಭೆ ಚಂದ್ರಶೇಖರ ಸಿದ್ಧಿ ಅವರು ನೀನಾಸಂ ಸಂಸ್ಥೆಯಲ್ಲಿ ನಟನೆಯನ್ನು ಕಲಿತಿದ್ದರು. ನಂತರ 2020ರಲ್ಲಿ ಜೀ ಕನ್ನಡ ವಾಹಿನಿಯ 'ಕಾಮಿಡಿ ಕಿಲಾಡಿಗಳು' ಸೀಸನ್ 3 ಶೋಗೆ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದರು. ಅಲ್ಲಿ ಅವರಿಗೆ ಸಾಕಷ್ಟು ಜನಮನ್ನಣೆ ಸಿಕ್ಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



