'ಅನ್‌ಲಾಕ್ ರಾಘವ’ ಖ್ಯಾತಿಯ ನಟ ಮಿಲಿಂದ್ ಗುಡ್ನ್ಯೂಸ್: 4 ಹೊಸ ಸಿನಿಮಾಗಳಿಗೆ ಸಹಿ
“ಅನ್ ಲಾಕ್ ರಾಘವ” ಚಿತ್ರದ ನಂತರ ಸಾಕಷ್ಟು ಚಿತ್ರಗಳ ಕಥೆ ಕೇಳಿದೆ. ಅದರಲ್ಲಿ ನಾಲ್ಕು ಕಥೆಗಳು ಬಹಳ ಇಷ್ಟವಾಗಿದೆ. ಈ ನಾಲ್ಕು ಚಿತ್ರಗಳು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಾಗಿರುತ್ತದೆ.

“ಅನ್ ಲಾಕ್ ರಾಘವ” ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್'ವುಡ್'ಗೆ ಪಾದಾರ್ಪಣೆ ಮಾಡಿದ್ದ ನಟ ಮಿಲಿಂದ್ ಅವರು ವರಮಹಾಲಕ್ಷ್ಮೀ ಹಬ್ಬದ ಶುಭ ಸಂದರ್ಭದಲ್ಲಿ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
“ಅನ್ ಲಾಕ್ ರಾಘವ” ಚಿತ್ರದ ನಂತರ ಸಾಕಷ್ಟು ಚಿತ್ರಗಳ ಕಥೆ ಕೇಳಿದೆ. ಅದರಲ್ಲಿ ನಾಲ್ಕು ಕಥೆಗಳು ಬಹಳ ಇಷ್ಟವಾಗಿದೆ. ಈ ನಾಲ್ಕು ಚಿತ್ರಗಳು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಾಗಿರುತ್ತದೆ.
4 ಬೇರೆ ಬೇರೆ ನಿರ್ಮಾಣ ಸಂಸ್ಥೆಗಳು ನಿರ್ಮಿಸುತ್ತಿರುವ ಈ ಚಿತ್ರಗಳನ್ನು ನಾಲ್ಕು ಜನ ನಿರ್ದೇಶಕರು ನಿರ್ದೇಶಿಸಲಿದ್ದಾರೆ. ಈ ಚಿತ್ರಗಳ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇನೆ. ನನಗೆ ಮೊದಲಿನಿಂದಲೂ ತಾವು ನೀಡುತ್ತಿರುವ ಪ್ರೀತಿ ಹಾಗೂ ಸಹಕಾರ ಮುಂದೆಯೂ ಹೀಗೆ ಮುಂದುವರೆಯಲಿ ಎಂದು ಮಿಲಿಂದ್ ತಿಳಿಸಿದ್ದಾರೆ.
ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದ “ಅನ್ ಲಾಕ್ ರಾಘವ” ಚಿತ್ರದ ಮೂಲಕ ಮಿಲಿಂದ್ ನಾಯಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಈ ಚಿತ್ರದಲ್ಲಿ ನಟನೆ ಹಾಗೂ ನೃತ್ಯದ ಮೂಲಕ ಮಿಲಿಂದ್ ನಾಡಿನ ಜನರ ಮನ ಗೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



