‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ: ಸೆಲೆಬ್ರಿಟಿಗಳಿಗೆ 'ದಾಸ' ನ ಸಂದೇಶ
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.
‘ಇದು ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ’ ಎಂದು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೋಟ್ಯಂತರ ರೂಪಾಯಿ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ. ಹಾಗಾಗಿ ನನ್ನ ‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನು ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು, ಇಂತಿ ನಿಮ್ಮ ದಾಸ ಎಂದೂ ಆ ಪೋಸ್ಟ್‌ನಲ್ಲಿ ಬರೆಯಲಾಗಿದೆ.
ದರ್ಶನ್ ಬಂಧನದಿಂದಾಗಿ ಆ.15ರಂದು ಬಿಡುಗಡೆಯಾಗಬೇಕಿದ್ದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆಯನ್ನು ಚಿತ್ರತಂಡ ಮುಂದೂಡಿತ್ತು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ಈ ಪೋಸ್ಟ್ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


