‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ; Video
ಬೆಂಗಳೂರು, ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ನಾಳೆ ಮಧ್ಯಾಹ್ನ 1: 0ರಿಂದಈ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಓಪನ್ ಆಗಲಿದೆ.
ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಂಗಳೂರು, ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.
ಬೆಂಗಳೂರಿನ ನವರಂಗ ಚಿತ್ರಮಂದಿರದ ಮುಂಭಾಗ ಪಟಾಕಿ ಸಿಡಿಸಿ, ಬೃಹತ್ ಮೂರು ಕಟೌಟ್ ಹಾಕುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವಮೊಗ್ಗದಲ್ಲಿಯೂ ಇದೇ ರೀತಿ ಭರ್ಜರಿ ಸಿದ್ಧತೆ ನಡೆಸಲಾಗಿದೆ.
ಇನ್ನೂ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 3 ಲಕ್ಷ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.
ದರ್ಶನ್ ಅವರು ಟ್ರೇಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



