ಸಿನಿಮಾ ಸುದ್ದಿ

'ಗುಮ್ಮಡಿ ನರಸಯ್ಯ' ಚಿತ್ರಕ್ಕೆ ಮುಹೂರ್ತ: ಮಾಜಿ ಶಾಸಕರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ಇಂದು ಅವರ ಹೆಸರಿನಲ್ಲಿ ತೆಲುಗಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಅದರಲ್ಲಿ ಹೀರೋ ಆಗಿ ನಟಿಸುತ್ತಿರುವವರು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್.

'ಗುಮ್ಮಡಿ ನರಸಯ್ಯ' ಚಿತ್ರಕ್ಕೆ ಮುಹೂರ್ತ: ಮಾಜಿ ಶಾಸಕರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಭೇಟಿ
ನಟ ಶಿವರಾಜ್ ಕುಮಾರ್, ಗೀತಾ ಮಾಜಿ ಶಾಸಕ ಗುಮ್ಮಡಿ ನರಸಯ್ಯ ನಿವಾಸದಲ್ಲಿ
Published On :

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಶಾಸಕರಾಗಿದ್ದರೂ ತಮ್ಮ ಸರಳ ವ್ಯಕ್ತಿತ್ವ, ಜೀವನಶೈಲಿಯಿಂದ ಜನಪ್ರಿಯರಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇಂದು ಅವರ ಹೆಸರಿನಲ್ಲಿ ತೆಲುಗಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಅದರಲ್ಲಿ ಹೀರೋ ಆಗಿ ನಟಿಸುತ್ತಿರುವವರು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಇಂದು ಚಿತ್ರಕ್ಕೆ ಮುಹೂರ್ತ ನಡೆಯಲಿದೆ.

ಗುಮ್ಮಡಿ ನರಸಯ್ಯ ಚಿತ್ರದ ಪೋಸ್ಟರ್
ಗುಮ್ಮಡಿ ನರಸಯ್ಯ ಚಿತ್ರದ ಪೋಸ್ಟರ್

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವಣ್ಣ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಭೇಟಿ ನೀಡಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.