ಸಿನಿಮಾ ಸುದ್ದಿ

ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿದ್ದು ಜನರಿಗಲ್ಲ, ಫ್ರೆಂಡ್ ಕಮ್ ಮ್ಯಾನೇಜರ್​ಗೆ: ಜಮೀರ್ ಪುತ್ರ ಝೈದ್ ಖಾನ್‌ ಸ್ಪಷ್ಟನೆ

ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಆರ್ಯನ್ ಖಾನ್ ದೊಡ್ಡ ಎಡವಟ್ಟು ಮಾಡಿಕೊಂಡಿದ್ದರು. ಜನರತ್ತ ತಿರುಗಿ ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿಸಿದ್ದರು.

ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿದ್ದು ಜನರಿಗಲ್ಲ, ಫ್ರೆಂಡ್ ಕಮ್ ಮ್ಯಾನೇಜರ್​ಗೆ: ಜಮೀರ್ ಪುತ್ರ ಝೈದ್ ಖಾನ್‌ ಸ್ಪಷ್ಟನೆ
ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ನಟ ಝೈದ್ ಖಾನ್‌
Published On :

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿದ್ದು ಜನರಿಗಲ್ಲ, ಫ್ರೆಂಡ್ ಕಮ್ ಮ್ಯಾನೇಜರ್​ಗೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಹಾಗೂ ನಟ ಝೈದ್ ಖಾನ್‌ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಆರ್ಯನ್ ಖಾನ್ ದೊಡ್ಡ ಎಡವಟ್ಟು ಮಾಡಿಕೊಂಡಿದ್ದರು. ಜನರತ್ತ ತಿರುಗಿ ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿಸಿದ್ದರು.

ಘಟನೆ ನಡೆಯುವಾಗ ಜಮೀರ್ ಅಹ್ಮದ್ ಮಗ, ನಟ ಝೈದ್ ಖಾನ್ ಕೂಡ ಅಲ್ಲಿಯೇ ಇದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಆರ್ಯನ್ ಖಾನ್​ ನನಗೆ ಹಲವು ವರ್ಷಗಳಿಂದ ಗೊತ್ತು. ನಾವಿಬ್ಬರೂ ಒಂದೇ ಕಡೆ ನಟನೆ ಕಲಿತಿದ್ದೇವೆ. ಅವನು ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದ. ಹೀಗಾಗಿ ಒಂದು ಓಪನಿಂಗ್ ಸೆರಮನಿಗೆ ಹೋಗಿದ್ದೆವು. ‘ಅಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಜನ ಸೇರಿದ್ದರು. ಇಷ್ಟು ಜನರಿದ್ದರೆ ನನ್ನಿಂದ ಸಾಧ್ಯವಿಲ್ಲ ಎಂದು ಆರ್ಯನ್ ಹೇಳಿದ.

ಬಳಿಕ ಅವನ ಮ್ಯಾನೇಜರ್ (ಗೆಳೆಯ ಕೂಡ ಹೌದು) ಜನರನ್ನು ಚದುರಿಸುತ್ತೇನೆ ಎಂದು ಹೋದ. ಎಷ್ಟು ಹೊತ್ತಾದರೂ ಬರಲಿಲ್ಲ. ಆಗ ನಾವು ಬಾಲ್ಕನಿಗೆ ಹೋಗಿ ಏನಾಗಿದೆ ಎಂದು ನೋಡಿದೆವು. ಈ ವೇಳೆ ಆರ್ಯನ್ ತನ್ನ ಫ್ರೆಂಡ್ ಕಮ್ ಮ್ಯಾನೇಜರ್​ಗೆ ಹಾಗೆ ತೋರಿಸಿದ. ಅದು ಜನರಿಗೆ ತೋರಿಸಿದ್ದಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.