ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಪ್ರಯತ್ನ 'ಕರಿಕಾಡ'
ಕಾಡ ನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ, ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಪ್ರಯತ್ನದ “ಕರಿಕಾಡ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಸಾಹಸಮ ದೃಶ್ಯಕಾವ್ಯವಾಗಿ, ಪ್ರೇಮಕಥೆಯ ರೂಪಕವಾಗಿ, ನಮ್ಮ ಮಣ್ಣಿನ ಸೊಗಡನ್ನ ಸೂಸುವಂತಹ ಕಥಾಹಂದರ ಹೊಂದಿರುವಂತೆ ಕಾಣುತ್ತಿದೆ. ರಿವೇಂಜ್ ಸ್ಟೋರಿಯಂತೆ ಭಾಸವಾಗುವ ಈ ಸಿಮಾದ ತಾರಾಗಣ ಮತ್ತು ತಾಂತ್ರಿಕತೆ ಗಮನ ಸೆಳೆಯುತ್ತಿದೆ.
ಕಾಡ ನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ, ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಮಂಜು ಸ್ವಾಮಿ, ಗೋವಿಂದ ಗೌಡ, ದೀವಾಕರ್, ಕಾಮಿಡಿ ಕಿಲಾಡಿ ಸೂರ್ಯ, ದಿ.ರಾಕೇಶ್ ಪೂಜಾರಿ, ವಿಜಯ್ ಚಂಡೂರು, ಚಂದ್ರಪ್ರಭ , ಕರಿಸುಬ್ಬು, ಗಿರಿ, ಮಾಸ್ಟರ್ ಆರ್ಯನ್, ಬಾಲನಟಿ ರಿದ್ಧಿ, ಹಾಗೂ ಮುಂತಾದವರು.
ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ನಡಿ ಕಾಡ ನಟರಾಜ್ ಅವರ ಧರ್ಮಪತ್ನಿ ದೀಪ್ತಿ ದಾಮೋದರ್ ತನ್ನ ಪತಿಯ ಕನಸಿನ ಗುರಿಗೆ ದಾರಿ ತೋರಿಸಿದ್ದಾರೆ. ರವಿಕುಮಾರ್ ಎಸ್.ಆರ್ ಸಹ ನಿರ್ಮಾಣದ ಸಾಥ್ ನೀಡಿದ್ದಾರೆ. ಕರಿಕಾಡ ಚಿತ್ರಕ್ಕೆ ಗಿಲ್ಲಿ ವೆಂಕಟೇಶ್ ನಿರ್ದೇಶಿಸಿದ್ದು, ಕಾಡ ನಟರಾಜ ಅವರ ಕಥೆ ಇದೆ.
ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಸಂಗೀತ ಚಿತ್ರಕ್ಕಿದೆ. ಶಶಾಂಕ್ ಶೇಷಾಗರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನ ನೀಡಿದ್ದಾರೆ. ಜೀವನ್ ಗೌಡ ಕ್ಯಾಮರಾ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



