ಸಿನಿಮಾ ಸುದ್ದಿ

'ಲಾರ್ಡ್ ಗಾಗಾ' ಚಿತ್ರದಲ್ಲಿ ಹೆಡ್ ಬುಷ್ ಖ್ಯಾತಿಯ ನಿರ್ದೇಶಕ ಶೂನ್ಯ; ಮುಖ್ಯ ಪಾತ್ರದಲ್ಲಿ ನಟನೆ

ಚಿತ್ರಕ್ಕೆ ಹೇಮಂತ್ ಕುಮಾರ್ ಸಂಗೀತ ಸಂಯೋಜಿಸಲಿದ್ದು, ಜೀವನ್ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ.

'ಲಾರ್ಡ್ ಗಾಗಾ' ಚಿತ್ರದಲ್ಲಿ ಹೆಡ್ ಬುಷ್ ಖ್ಯಾತಿಯ ನಿರ್ದೇಶಕ ಶೂನ್ಯ; ಮುಖ್ಯ ಪಾತ್ರದಲ್ಲಿ ನಟನೆ
ನಿರ್ದೇಶಕ ಶೂನ್ಯ
Published On :

ಡಾಲಿ ಧನಂಜಯ್ ಅಭಿನಯದ 2022ರ ಹೆಡ್ ಬುಷ್‌ ಚಿತ್ರಕ್ಕೆ ಹೆಸರುವಾಸಿಯಾದ ನಿರ್ದೇಶಕ ಶೂನ್ಯ ಇದೀಗ ನಟನೆಯತ್ತ ಹೊರಳಿದ್ದಾರೆ. 'ಲಾರ್ಡ್ ಗಾಗಾ' ಎನ್ನುವ ಶೀರ್ಷಿಕೆಯ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ 'ಗಿಲ್ಕಿ' ಚಿತ್ರ ನಿರ್ದೇಶಿದ್ದ ವೈಕೆ 'ಲಾರ್ಡ್ ಗಾಗಾ' ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದೊಂದು ಆ್ಯಕ್ಷನ್-ಪ್ಯಾಕ್ಡ್ ಅಡ್ವೆಂಚರ್ ಚಿತ್ರವಾಗಿ ರೂಪುಗೊಂಡಿದ್ದು, ಶೂನ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಆಪ್ತ ಸ್ನೇಹಿತ ಮುಕಿ ಅವರ ಜೊತೆಗೂಡಿ ತಮ್ಮದೇ ಆದ ಝೀರೋ ಗ್ರಾವಿಟಿ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಡಿ ಶೂನ್ಯ ಅವರೇ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಹೇಮಂತ್ ಕುಮಾರ್ ಸಂಗೀತ ಸಂಯೋಜಿಸಲಿದ್ದು, ಜೀವನ್ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ಉಡುಪಿ ಮತ್ತು ಮಂಗಳೂರಿನ ರಮಣೀಯ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇನ್ನೊಂದೆಡೆ ನಿರ್ದೇಶಕ ಶೂನ್ಯ ನಟ ಯೋಗಿ ಜೊತೆ ರೋಸಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.