ಪ್ರಜ್ವಲ್ ದೇವರಾಜ್ ನಟನೆಯ 'ರಾಕ್ಷಸ' ಚಿತ್ರ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದಕ್ಕೆ
ಇದೇ ಮೊದಲ ಬಾರಿಗೆ ನಟ ಪ್ರಜ್ವಲ್ ದೇವರಾಜ್ ಹಾರರ್ ಸಿನಿಮಾದಲ್ಲಿ ನಟಿಸಿದ್ದಾರೆ. ಮಮ್ಮಿ ಸೇವ್ ಮಿ ಮತ್ತು ದೇವಕಿ ನಿರ್ದೇಶಕ ಲೋಹಿತ್ ಎಚ್ ನಿರ್ದೇಶನದ ಈ ಚಿತ್ರದಲ್ಲಿ ಸೋನಲ್ ಮೊಂತೇರೊ ನಾಯಕಿಯಾಗಿ ನಟಿಸಿದ್ದಾರೆ.

ಈವರೆಗೆ 36ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್, ಇದೀಗ ಲೋಹಿತ್ ಹೆಚ್ ನಿರ್ದೇಶನದ ಟೈಮ್-ಲೂಪ್ ಹಾರರ್ ಚಿತ್ರ 'ರಾಕ್ಷಸ'ದೊಂದಿಗೆ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧರಾಗಿದ್ದಾರೆ. ಚಿತ್ರವು ಶಿವರಾತ್ರಿ ಹಬ್ಬದಂದು ಫೆಬ್ರುವರಿ 26ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಿದ್ಧ ಎಂದು ಈ ಹಿಂದೆ ಚಿತ್ರತಂಡ ಘೋಷಿಸಿತ್ತು. ಆದರೆ, ಮತ್ತೊಮ್ಮೆ ಚಿತ್ರಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಚಿತ್ರವು ಈಗ ಮಾರ್ಚ್ 7 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ತಾಂತ್ರಿಕ ತೊಂದರೆಗಳಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಶಾನ್ವಿ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ದೀಪು ಬಿಎಸ್, ನವೀನ್ ಗೌಡ ಮತ್ತು ಮಾನಸ್ ಈ ಸಿನಿಮಾವನ್ನು ನಿರ್ಮಿಸಿದ್ದು, ನೋಬಿನ್ ಪಾಲ್ ಅವರ ಸಂಗೀತ ಸಂಯೋಜನೆ, ಜೇಬಿನ್ ಪಿ ಜೇಕಬ್ ಅವರ ಛಾಯಾಗ್ರಹಣ, ವಿನೋದ್ ಅವರ ಸಾಹಸ ನಿರ್ದೇಶನವಿದೆ.
ಇದೇ ಮೊದಲ ಬಾರಿಗೆ ನಟ ಪ್ರಜ್ವಲ್ ದೇವರಾಜ್ ಹಾರರ್ ಸಿನಿಮಾದಲ್ಲಿ ನಟಿಸಿದ್ದಾರೆ. ಮಮ್ಮಿ ಸೇವ್ ಮಿ ಮತ್ತು ದೇವಕಿ ನಿರ್ದೇಶಕ ಲೋಹಿತ್ ಎಚ್ ನಿರ್ದೇಶನದ ಈ ಚಿತ್ರದಲ್ಲಿ ಸೋನಲ್ ಮೊಂತೆರೋ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರದಲ್ಲಿ ಶ್ರೀಧರ್, ಗೌತಮ್, ಸೋಮಶೇಖರ್, ವಿಹಾನ್ ಕೃಷ್ಣ, ಶೋಭರಾಜ್, ವತ್ಸಲಾ ಮೋಹನ್, ಸಿದ್ಲಿಂಗು ಶ್ರೀಧರ್ ಮತ್ತು ಅರುಣ್ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ರಾಕ್ಷಸ ಸಿನಿಮಾದ ಶೇ 80 ರಷ್ಟು ಚಿತ್ರೀಕರಣ ರಾಮೋಜಿ ಫಿಲಂ ಸಿಟಿಯಲ್ಲಿ ನಡೆದಿದ್ದು, ಚಿತ್ರದ ಇನ್ನುಳಿದ ಭಾಗವನ್ನು ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


