ಕ್ಯಾನ್ಸರ್ ಸರ್ಜರಿ ಸಕ್ಸಸ್: ಆಸ್ಪತ್ರೆಯಿಂದ ಶಿವಣ್ಣ ಡಿಸ್ಚಾರ್ಜ್, ಶೀಘ್ರದಲ್ಲೇ ಬೆಂಗಳೂರಿಗೆ ಆಗಮನ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್ ಆಗಿತ್ತು.

ವಾಷಿಂಗ್ಟನ್: ಇತ್ತೀಚೆಗಷ್ಟೇ ಕ್ಯಾನ್ಸರ್ ಸರ್ಜರಿಗೆ ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಅಗಮಿಸಲಿದ್ದಾರೆ ಎನ್ನಲಾಗಿದೆ.
ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್‌ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್ ಚೆಕಪ್ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊನೆಗೂ ಫಲಿಸಿದ ಅಭಿಮಾನಿಗಳ ಹಾರೈಕೆ; 'ಶಿವಣ್ಣ ಈಗ ಕ್ಯಾನ್ಸರ್ ಫ್ರೀ'.. ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಗೀತಕ್ಕ!
ಸದ್ಯ ಈ ತಿಂಗಳ ಕೊನೆಯ ವಾರದವರೆಗೂ ಶಿವಣ್ಣ ಅಮೇರಿಕಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 24ರ ಬಳಿಕ ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಣ್ಣ ಫುಲ್ ಆ್ಯಕ್ಟಿವ್
ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಶಿವಣ್ಣ ಪುಲ್ ಆ್ಯಕ್ಟಿವ್ ಆಗಿದ್ದರು. ಆಸ್ಪತ್ರೆ ಆವರಣದಲ್ಲೇ ಕೆಲ ಹೊತ್ತು ಸುತ್ತಾಡಿದ ಶಿವಣ್ಣ ತಮ್ಮ ಕುಟುಂಬದವರೊಂದಿಗೆ ಸೆಲ್ಫಿಗೆ ಪೋಸ್ ನೀಡಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


