ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ 'ಕಾಂತಾರ' ನಟ ಕಿಶೋರ್ ರಾಯಭಾರಿ
ನಟ ಕಿಶೋರ್ ಕನ್ನಡ ಮಾತ್ರವಲ್ಲದೇ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಫಿಲ್ಮ್ ಫೆಸ್ಟಿವಲ್ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು: ಕನ್ನಡದ ನಟ ಕಿಶೋರ್ ಕುಮಾರ್ ಅವರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್ 1ರಿಂದ 8ರ ತನಕ 2024-2025ನೇ ಸಾಲಿನ 16ನೇ Bengaluru International Film Festival (BIFFES) ಬೆಂಗಳೂರಿನಲ್ಲಿ ನಡೆಯಲಿದೆ. ನಟ ಕಿಶೋರ್ ಕನ್ನಡ ಮಾತ್ರವಲ್ಲದೇ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಫಿಲ್ಮ್ ಫೆಸ್ಟಿವಲ್ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ನಟ ಕಿಶೋರ್ ಕುಮಾರ್ ಗೆ ಅಭಿನಂದನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಬರೆದಿದ್ದಾರೆ.
ಈ ಸಿನಿಮೋತ್ಸವದಲ್ಲಿ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಅಲ್ಲದೇ ಈ ಚಿತ್ರಗಳ ಕುರಿತಂತೆ ವಿಚಾರ ಸಂಕಿರಣಗಳು ಕೂಡ ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


