ಅರಣ್ಯ ನಿಯಮ ಉಲ್ಲಂಘನೆಯಾಗಿಲ್ಲ: 'ಕಾಂತಾರ' ಚಿತ್ರತಂಡಕ್ಕೆ ಕ್ಲೀನ್ ಚಿಟ್
ಸಿನಿಮಾ ಚಿತ್ರೀಕರಣದ ವೇಳೆ ಬ್ಲಾಸ್ಟ್ ಮಾಡಲಾಗಿದೆ, ಮರಕಡಿಯಲಾಗಿದೆ, ಇದರಿಂದ ಕಾಡು ಪ್ರಾಣಿಗಳು ಗ್ರಾಮಗಳತ್ತ ನುಗ್ಗಿ ಬರುತ್ತಿವೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.

ಬೆಂಗಳೂರು: ರಿಷಬ್ ಶೆಟ್ಟಿ, ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಕಾಡಿನಲ್ಲಿ ಬ್ಲಾಸ್ಟ್ ಮಾಡಿ ಅರಣ್ಯ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿತ್ತು. ಶೂಟಿಂಗ್ ವೇಳೆ ಕಾಡಿನಲ್ಲಿ ಬೆಂಕಿ ಹಚ್ಚಿ ಸಾಕಷ್ಟು ಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಇದೀಗ ಪ್ರಕರಣದಲ್ಲಿ ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ಸಮೀಪ ಇರುವ ಗವಿಗುಡ್ಡ ಪ್ರದೇಶದ ಡೀಮ್ಡ್ ಅರಣ್ಯ ಹಾಗು ಗೋಮಾಳ ಜಮೀನಿನಲ್ಲಿ ಚಿತ್ರೀಕರಣ ಮಾಡಲು ಕಾಂತಾರ ತಂಡ ಅನುಮತಿ ಪಡೆದಿಕೊಂಡಿತ್ತು. ತಂಡದವರು ಅಕ್ರಮವಾಗಿ ಮರಕಡಿದು, ಸ್ಫೋಟಕ ಬಳಸಿ, ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಕೆಲ ಸ್ಥಳೀಯರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅರಣ್ಯಾಧಿಕಾರಿಗಳ ತಂಡ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ.
ಸ್ಥಳೀಯರ ಆರೋಪ
ಸಿನಿಮಾ ಚಿತ್ರೀಕರಣದ ವೇಳೆ ಬ್ಲಾಸ್ಟ್ ಮಾಡಲಾಗಿದೆ, ಮರ ಕಡಿಯಲಾಗಿದೆ, ಇದರಿಂದ ಕಾಡು ಪ್ರಾಣಿಗಳು ಗ್ರಾಮಗಳತ್ತ ನುಗ್ಗಿ ಬರುತ್ತಿವೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು.
ತನಿಖೆಗೆ ಆದೇಶ
ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡಿ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಥಳಪರಿಶೀಲನೆ ನಡೆಸಿದ್ದ ಸಕಲೇಶಪುರ ಎಸಿಎಫ್ ಮಧು ಹಾಗು ಯಸಳೂರು ವಿಭಾಗದ ಆರ್ಎಫ್ಓ ಕೃಷ್ಣ ನೇತೃತ್ವದ ತಂಡ ಚಲನಚಿತ್ರದ ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿದ್ದರು. ಆ ಬಳಿಕ ಡಿಸಿಎಫ್ಗೆ ವರದಿ ನೀಡಿದ್ದು, ‘ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ’ ಎಂದು ವರದಿ ನೀಡಿದ್ದರು.
ಹೀಗಾಗಿ ಚಿತ್ರತಂಡಕ್ಕೆ ಯಾವುದೇ ಅಡ್ಡಿಯಿಲ್ಲದೆ ಸಿನಿಮಾ ಶೂಟಿಂಗ್ ಮುಂದುವರಿಸಲು ಅವಕಾಶ ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




