ಸಿನಿಮಾ ಸುದ್ದಿ

ಆರೋಗ್ಯದಲ್ಲಿ ಏರುಪೇರು: ನಟ ವಿಜಯ ದೇವರಕೊಂಡ ಆಸ್ಪತ್ರೆಗೆ ದಾಖಲು

ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರು: ನಟ ವಿಜಯ ದೇವರಕೊಂಡ ಆಸ್ಪತ್ರೆಗೆ ದಾಖಲು
ವಿಜಯ ದೇವರಕೊಂಡ
Published On :

ಬಾಲಿವುಡ್ ನಟ ವಿಜಯ್ ದೇವರಕೊಂಡ ಕೆಲವೇ ದಿನಗಳಲ್ಲಿ ‘ಕಿಂಗ್‌ಡಮ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ. ಗೌತಮ್ ತಿನ್ನನುರಿ ನಿರ್ದೇಶನದ ಈ ಚಿತ್ರದಲ್ಲಿ ಭಾಗ್ಯಶ್ರೀ ಭೋರ್ಸ್ ನಾಯಕಿಯಾಗಿ ನಟಿಸಿದ್ದಾರೆ.

ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಪ್ರಸ್ತುತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಡೆಂಗ್ಯೂ ಆದಾಗ ಬಿಳಿ ರಕ್ತ ಕಣದಲ್ಲಿ ಸಾಕಷ್ಟು ಇಳಿಕೆ ಕಾಣುತ್ತದೆ. ಇದು ಜೀವಕ್ಕೂ ಅಪಾಯ ತಂದೊಡ್ಡಬಹುದು. ಹೀಗಾಗಿ, ವಿಜಯ್‌ಗೆ ಸಾಕಷ್ಟು ವಿಶ್ರಾಂತಿ ಬೇಕು ಎಂದು ವೈದ್ಯರು ಹೇಳಿದ್ದಾರೆ. ಈ ತಿಂಗಳ 20ರಂದು ವಿಜಯ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವರದಿ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.