BBK12 Big Update: ಬಿಗ್ ಬಾಸ್ ನಿರೂಪಣೆಗೆ ಒಪ್ಪಿಕೊಂಡ್ರಾ ಕಿಚ್ಚ ಸುದೀಪ್? ದಿಢೀರ್ ಪ್ರೆಸ್ಮೀಟ್ ಕರೆದ ಆಯೋಜಕರು!
ಬಿಗ್ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ.

ಬಿಗ್ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಬಿಗ್ ಬಾಸ್ ಮುಗಿಯುತ್ತಿದ್ದಂತೆ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದರು. ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರು ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ. ಈಗಿರುವಾಗ ಹೊಸ ಆವೃತ್ತಿಯ ಕುರಿತಂತೆ ನಾಳೆ ಬಿಗ್ ಬಾಸ್ ಆಯೋಜಕರು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ.
ತಾಜ್ ಹೋಟೆಲ್ನಲ್ಲಿ ಜೂನ್ 30ರಂದು ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಾಳೆ ಬಿಗ್ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ. ಒಂದು ವೇಳೆ ಕಿಚ್ಚ ಸುದೀಪ್ ಒಪ್ಪಿಕೊಂಡಿದ್ದರೆ ಮುಂದಿನ ಆವೃತ್ತಿಯನ್ನು ಅವರೇ ನಿರೂಪಣೆ ಮಾಡಲಿದ್ದಾರೆ. ಇಲ್ಲದಿದ್ದರೆ ಅವರ ಜಾಗಕ್ಕೆ ಯಾರೂ ಬರುತ್ತಾರೆ ಎಂಬುದು ನಾಳೆ ಸಂಜೆ 4 ಗಂಟೆಗೆ ತಿಳಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



