ಸಿನಿಮಾ ಸುದ್ದಿ

ಕೈಹಿಡಿದು ಎಳೆದ ಅಭಿಮಾನಿ; ಕಪಾಳ ಮೋಕ್ಷ ಮಾಡಿದ ನಟಿ Ragini Dwivedi

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಟಿ ರಾಗಿಣಿ ದ್ವಿವೇದಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ನಟಿ ರಾಗಿಣಿ ಕೂಡ ಎಲ್ಲರೊಂದಿಗೆ ಫೋಟೋಗೆ ಪೋಸ್ ನೀಡುತ್ತಿದ್ದರು.

ಕೈಹಿಡಿದು ಎಳೆದ ಅಭಿಮಾನಿ; ಕಪಾಳ ಮೋಕ್ಷ ಮಾಡಿದ ನಟಿ Ragini Dwivedi
ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ನಟಿ ರಾಗಿಣಿ ದ್ವಿವೇದಿ
Published On :

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ ಅಭಿಮಾನಿಯೋರ್ವ ಅನುಚಿತ ವರ್ತನೆ ತೋರಿ ಕಪಾಳಮೋಕ್ಷ ಮಾಡಿಸಿಕೊಂಡಿರುವ ಘಟನೆ ವರದಿಯಾಗಿದೆ.

ಹೌದು.. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಟಿ ರಾಗಿಣಿ ದ್ವಿವೇದಿ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಈ ವೇಳೆ ನಟಿ ರಾಗಿಣಿ ಕೂಡ ಎಲ್ಲರೊಂದಿಗೆ ಫೋಟೋಗೆ ಪೋಸ್ ನೀಡುತ್ತಿದ್ದರು.

ಈ ವೇಳೆ ಅಭಿಮಾನಿಯೋರ್ವ ನಟಿ ರಾಗಿಣಿ ಅವರ ಕೈಹಿಡಿದು ಎಳೆದು ಅನುಚಿತ ವರ್ತನೆ ತೋರಿದ್ದಾನೆ. ಇದರಿಂದ ಆಕ್ರೋಶಗೊಂಡ ನಟಿ ರಾಗಿಣಿ ಆತನ ಕಪಾಳಕ್ಕೆ ಭಾರಿಸಿದ್ದಾರೆ. ಈ ಕುರಿತ ವಿಡಿಯೋ ಇನ್ ಸ್ಟಾಗ್ರಾಂ ನಲ್ಲಿ ವೈರಲ್ ಆಗಿತ್ತಾದರೂ ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ. ಆದರೆ ಕಪಾಳ ಮೋಕ್ಷದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಿಜಕ್ಕೂ ಏನಾಯ್ತು?

ರಾಗಿಣಿ ದ್ವಿವೇದಿ ಅವರು ಇವೆಂಟ್‌ ಗಾಗಿ ಪಿಂಕ್‌ ಬಣ್ಣದ ಫ್ರಾಕ್‌ ತೊಟ್ಟು ಎಂಜಿ ರೋಡ್‌ನಲ್ಲಿರುವ ಪಬ್‌ ಒಂದಕ್ಕೆ ಎಂಟ್ರಿ ಕೊಟ್ಟಿದ್ದರು. ನಟಿ ಆಗಮಿಸಿದಾಗ ಅಭಿಮಾನಿಗಳು ಫೋಟೋ ತಗೊಳ್ಳಲು ಮುಗಿಬಿದ್ದಿದ್ದಾರೆ. ರಾಗಿಣಿ ದ್ವಿವೇದಿ ಅವರು ಫ್ಯಾನ್ಸ್‌ಗೆ ಫೋಟೋ ನೋಡಿ, ಮಾತನಾಡಿಸುತ್ತಿದ್ದರು. ಈ ವೇಳೆ ಓರ್ವ ಅಭಿಮಾನಿ ಅವರ ಕೈ ಹಿಡಿದು ಎಳೆದಿದ್ದಾನೆ. ಇದರಿಂದ ಆಕ್ರೋಶಗೊಂಡ ನಟಿ ಆತನಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.