'ಸೆಲೆಬ್ರಿಟಿಸ್' ಗಳ ನಡೆಗೆ ನಟ ದರ್ಶನ್ ಅಸಮಾಧಾನ! ವಿಡಿಯೋ ಹಂಚಿಕೊಂಡು D'BOSS ವಾರ್ನಿಂಗ್!
ಈ ರೀತಿಯ ನಡೆಯಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ .

ಬೆಂಗಳೂರು: ಅಭಿಮಾನಿಗಳನ್ನು 'ಸೆಲೆಬ್ರಿಟಿಸ್' ಎಂದೇ ಕರೆಯುವ ನಟ ದರ್ಶನ್ ಇದೀಗ ಅದೇ ಸೆಲೆಬ್ರಿಟಿಸ್ ಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು. ಅವರ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.
ಡೆವಿಲ್ ಚಿತ್ರದಿಂದ ಚಂದು ಔಟ್: ಈ ರೀತಿಯ ನಡೆಯಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ.
ಚಂದು ಅಥವಾ ನನ್ನ ಮಗ ವಿನೀಶ್ ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ ಎಂದು ಹೇಳುವ ಮೂಲಕ ವಾರ್ನಿಂಗ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



