ಹಿರಿಯ ನಟ ಮಮ್ಮುಟ್ಟಿಗೆ ಕ್ಯಾನ್ಸರ್? ಸೂಪರ್ ಸ್ಟಾರ್ PR ಟೀಮ್ ಹೇಳಿದ್ದೇನು?
ಮಮ್ಮುಟ್ಟಿ ಅವರು ಚಿತ್ರರಂಗದಿಂದ ಬ್ರೇಕ್ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾತೊಂದು ಮಾಲಿವುಡ್‌ನಲ್ಲಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ.

ಮಾಲಿವುಡ್ ಸಿನಿಮಾರಂಗದ ದಿಗ್ಗಜ ನಟ ಮಮ್ಮುಟ್ಟಿ ಅವರ ಆರೋಗ್ಯದ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಹಿರಿಯ ನಟ ಮಮ್ಮುಟ್ಟಿ ಅವರಿಗೆ 73 ವರ್ಷವಾದರೂ ಸಿನಿಮಾಗಳ ವಿಚಾರದಲ್ಲಿ ಅವರು ಒಂದಲ್ಲ ಒಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.
ಮಮ್ಮುಟ್ಟಿ ಅವರ ಸಿನಿಮಾಗಳು ಇಂದಿಗೂ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಗಳಿಕೆ ಕಾಣುತ್ತದೆ. ಮಮ್ಮುಟ್ಟಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಚಿತ್ರರಂಗದಿಂದ ಬ್ರೇಕ್ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾತೊಂದು ಮಾಲಿವುಡ್‌ನಲ್ಲಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ.
ಇದನ್ನು ಕೇಳಿ ಮಮ್ಮುಟ್ಟಿ ಅವರ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಮಮ್ಮುಟ್ಟಿ ಅವರ ತಂಡ ಸ್ಪಷ್ಟನೆ ನೀಡಿದೆ. ಇದು ಸುಳ್ಳು ಸುದ್ದಿ. ಅವರು ರಂಜಾನ್ ಉಪವಾಸ ಇರುವುದರಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.
ಆ ಕಾರಣದಿಂದಾಗಿ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿಲ್ಲ. ವಿರಾಮದ ನಂತರ ಅವರು ಮೋಹನ್ ಲಾಲ್ ಜೊತೆ ಮಹೇಶ್ ನಾರಾಯಣನ್ ಅವರ ಚಿತ್ರದ ಚಿತ್ರೀಕರಣಕ್ಕೆ ಹಿಂತಿರುಗುತ್ತಾರೆ ಎಂದು ನಟನ ತಂಡ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


