ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಮೊದಲ ಸಿನಿಮಾ 'ಫೈರ್ ಫ್ಲೈ' ಬಿಡುಗಡೆಗೆ ದಿನಾಂಕ ಫಿಕ್ಸ್
ಈ ಚಿತ್ರದ ಟೀಸರ್ ಪ್ರೇಕ್ಷಕರನ್ನು ಸೆಳೆದಿದ್ದು, ವಂಶಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟನೆಯೊಂದಿಗೆ ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರ ಚೊಚ್ಚಲ ನಿರ್ಮಾಣದ 'ಫೈರ್ ಫ್ಲೈ' ಚಿತ್ರ ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಜುಗಡೆಯಾಗಲು ಸಜ್ಜಾಗುತ್ತಿದೆ. ದಂತಕಥೆ ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದ ದಿನ ಚಿತ್ರ ಬಿಡುಗಡೆಗೆ ಚಿತ್ರತಂಡ ಯೋಜನೆ ರೂಪಿಸಿದೆ.
ಈ ಚಿತ್ರದ ಟೀಸರ್ ಪ್ರೇಕ್ಷಕರನ್ನು ಸೆಳೆದಿದ್ದು, ವಂಶಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟನೆಯೊಂದಿಗೆ ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಚಿತ್ರದಲ್ಲಿ ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದಾರ್ ಮತ್ತು ಮೂಗು ಸುರೇಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಟ ಶಿವರಾಜ್‌ಕುಮಾರ್, 'ಫೈರ್ ಫ್ಲೈ' ದುಃಖ ಮತ್ತು ಗುಣಪಡಿಸುವಿಕೆಯ ವಿಚಾರಗಳನ್ನು ಒಳಗೊಂಡಿದ್ದು, ಆಳ ಮತ್ತು ಸರಳತೆ ನಡುವಿನ ಸಮತೋಲನ ಕಾಯ್ದುಕೊಳ್ಳುವ ನಿರೂಪಣೆಯನ್ನು ಒಳಗೊಂಡಿದೆ. ಇದು ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನನಗೆ ವಿಶ್ವಾಸವಿದೆ' ಎಂದು ಹೇಳಿದರು.
'ನನ್ನ ಮಗಳ ನಿರ್ಮಾಣದ ಮೊದಲ ಚಿತ್ರ ಅಪ್ಪಾಜಿಯವರ ಹುಟ್ಟುಹಬ್ಬದಂದು ಬಿಡುಗಡೆಯಾಗುತ್ತಿರುವುದು ನನಗೆ ತುಂಬಾ ವಿಶೇಷವಾದ ಕ್ಷಣ. ವರ್ಷಗಳಿಂದ ನಮ್ಮ ಕುಟುಂಬವು ಪಡೆಯುತ್ತಿರುವ ಪ್ರೀತಿ ಅಪ್ಪಾಜಿಯವರು ನೀಡಿರುವ ಉಡುಗೊರೆಯಾಗಿದೆ. ಆ ಪ್ರೀತಿಯನ್ನು ಮುಂದಿನ ಪೀಳಿಗೆಗೆ ರವಾನಿಸುವುದನ್ನು ನೋಡುವುದು ಹೃದಯಸ್ಪರ್ಶಿಯಾಗಿದೆ. ಬೆಂಬಲ ನೀಡಿದ್ದಕ್ಕಾಗಿ ಎಲ್ಲ ಅಭಿಮಾನಿಗಳು ಮತ್ತು ಕನ್ನಡ ಸಿನಿಮಾ ಅಭಿಮಾನಿಗಳಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ' ಎಂದರು.
ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಚಿತ್ರದ ಮೊದಲ ಹಾಡು ಮಾರ್ಚ್ ಕೊನೇ ವಾರದಲ್ಲಿ ಆನಂದ್ ಆಡಿಯೋದ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಅಭಿಲಾಷ್ ಕಲಾಥಿ ಅವರ ಛಾಯಾಗ್ರಹಣ, ರಘು ನಿಡುವಳ್ಳಿ ಅವರ ಸಂಭಾಷಣೆ, ಸುರೇಶ್ ಆರ್ಮುಗಂ ಅವರ ಸಂಕಲನ, ವರದರಾಜ್ ಕಾಮತ್ ಅವರ ಕಲಾ ನಿರ್ದೇಶನ, ಅರ್ಜುನ್ ರಾಜ್ ಅವರ ಫೈಟ್ ಮತ್ತು ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಇದೆ.
ಇದು ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿದ್ದು, ಎಲ್ಲ ವಯಸ್ಸಿನ ವೀಕ್ಷಕರನ್ನು ಆಕರ್ಷಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಾರೆ ನಿರ್ಮಾಪಕರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




