ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್, ಸೋನಲ್ ಮೊಂತೆರೋ ನಟನೆಯ 'ಮಾದೇವ' ಬಿಡುಗಡೆ ದಿನಾಂಕ ನಿಗದಿ

'ಮಾದೇವ' ಚಿತ್ರದಲ್ಲಿ ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರದ್ಯೋತನ್ ಅವರ ಸಂಗೀತ ಸಂಯೋಜನೆ, ಬಾಲಕೃಷ್ಣ ತೋಟ ಅವರ ಛಾಯಾಗ್ರಹಣವಿದೆ.

ವಿನೋದ್ ಪ್ರಭಾಕರ್, ಸೋನಲ್ ಮೊಂತೆರೋ ನಟನೆಯ 'ಮಾದೇವ' ಬಿಡುಗಡೆ ದಿನಾಂಕ ನಿಗದಿ
ಮಾದೇವ ಚಿತ್ರದ ಸ್ಟಿಲ್
Published On :

ನವೀನ್ ರೆಡ್ಡಿ ಬಿ ನಿರ್ದೇಶನದ ಮತ್ತು ವಿನೋದ್ ಪ್ರಭಾಕರ್ ನಟಿಸಿರುವ ಮಾದೇವ ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ಮೇ 30 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಆ್ಯಕ್ಷನ್ ಪ್ರಧಾನ ಪಾತ್ರಗಳಿಂದ ಹೃದಯ ಗೆದ್ದಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೆ ಮಾಡಿರದ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ.

ರಾಧಾಕೃಷ್ಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ ಈ ಚಿತ್ರಕ್ಕೆ ಖಾಕಿ ಚಿತ್ರದ ನಂತರ ನವೀನ್ ರೆಡ್ಡಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕಾಗಿ ತಾವೇ ಕಥೆ ಮತ್ತು ಚಿತ್ರಕಥೆಯನ್ನೂ ಬರೆದಿದ್ದಾರೆ. ಈ ಚಿತ್ರಕ್ಕೆ ಪ್ರದ್ಯೋತನ್ ಅವರ ಸಂಗೀತ ಸಂಯೋಜನೆ, ಬಾಲಕೃಷ್ಣ ತೋಟ ಅವರ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಅವರ ಸಂಕಲನ, ಗುಣ ಅವರ ಕಲಾ ನಿರ್ದೇಶನ, ಜೊತೆಗೆ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್ ಮತ್ತು ವಿಕ್ರಮ್ ಮೋರ್ ಅವರ ಸಾಹಸ ಸಂಯೋಜನೆ ಇದೆ.

'ಮಾದೇವ' ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ಜೋಡಿಯಾಗಿ ಸೋನಲ್ ಮೊಂತೆರೋ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಹಿರಿಯ ನಟರಾದ ಮಾಲಾಶ್ರೀ, ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಮೈಕೋ ನಾಗರಾಜ್, ಬಾಲ ರಾಜವಾಡಿ, ಮುನಿರಾಜು ಮತ್ತು ಚೈತ್ರ ಕೂಡ ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.