'ಮೈಸೂರು ಸ್ಯಾಂಡಲ್'ಗೆ ಬ್ರ್ಯಾಂಡ್ ಅಂಬಾಸಿಡರ್ ಅಗತ್ಯವಿಲ್ಲ, ಜನ್ರ ಟ್ಯಾಕ್ಸ್ ಹಣ ವೇಸ್ಟ್ ಅಷ್ಟೆ: ನಟಿ ರಮ್ಯಾ
ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ, ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ ಎಂದಿದ್ದಾರೆ.

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ನ ರಾಯಭಾರಿಯಾಗಿ 2 ವರ್ಷಗಳ ಅವಧಿಗೆ 6 ಕೋಟಿ ರೂಪಾಯಿ ನೀಡಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಸಾಕಷ್ಟು ನಡೆಯುತ್ತಿದೆ.
ಈ ಬಗ್ಗೆ ಇಂದು ಇನ್ಸ್ಟಾಗ್ರಾಮ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಇಂದು ಒಂದು ವಸ್ತುವನ್ನು ಮಾರುಕಟ್ಟೆಯಲ್ಲಿ ಪ್ರಚಾರ ಮಾಡಲು ಹತ್ತಾರು ದಾರಿಗಳಿರುತ್ತವೆ. ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ, ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ ಎಂದಿದ್ದಾರೆ.
ಇಂದು ಸೆಲೆಬ್ರಿಟಿಗಳು ಬಳಸುತ್ತಾರೆ ಎಂಬ ಮಾತ್ರಕ್ಕೆ ಜನರು ವಸ್ತುಗಳನ್ನು ಖರೀದಿಸುವುದಿಲ್ಲ. ನಾವು ಸೋಪ್ ಬಳಸಿದರೆ ನಟಿಯ ರೀತಿ ಆಗುವುದಿಲ್ಲ ಎಂಬುದು ಜನತೆಗೆ ಚೆನ್ನಾಗಿ ಗೊತ್ತಿದೆ. ಜನರು ಅದನ್ನು ಮೆಚ್ಚಿ ಖರೀದಿಸಿ ಬಳಸಬೇಕೆಂದರೆ ವಸ್ತುವಿನ ಗುಣಮಟ್ಟವಿರಬೇಕು.
ಮೈಸೂರು ಸ್ಯಾಂಡಲ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು
ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಗೆ ದೀರ್ಘ ಇತಿಹಾಸವಿದೆ, ಪರಂಪರೆಯಿದೆ, ಪ್ರತಿ ಕನ್ನಡಿಗರು ಅದರ ರಾಯಭಾರಿಗಳು. ಮೈಸೂರು ಸ್ಯಾಂಡಲ್ ಸೋಪ್ ನ್ನು ಜಗತ್ತಿಗೆ ಪರಿಚಯಿಸಲು ಪ್ರತಿಯೊಬ್ಬರನ್ನೂ ಒಗ್ಗೂಡಿಸಿ.ಅದನ್ನು ಕನ್ನಡಿಗರು ಪ್ರೀತಿಯಿಂದ ಖುಷಿಯಿಂದ ಮಾಡುತ್ತಾರೆ. ಸಂಘಟಿತವಾಗಿ, ಸೃಜನಶೀಲವಾಗಿ ಗ್ರಾಹಕರೊಂದಿಗೆ ಸಂಬಂಧ ಹೊಂದುವುದು ಮುಖ್ಯವಾಗುತ್ತದೆ ಎಂದರು.
ಆಪಲ್ ಬಹಳ ಯಶಸ್ವಿ ಉದ್ಯಮವಾಗಿ ಬೆಳೆದಿದೆ, ಆದರೆ ಅದಕ್ಕೆ ಸಂಭಾವನೆ ನೀಡಿ ನೇಮಿಸಿದ ಬ್ರಾಂಡ್ ಅಂಬಾಸಿಡರ್ ಇರಲಿಲ್ಲ ಎಂದು ಕೂಡ ನಟಿ ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



