ಸಿನಿಮಾ ಸುದ್ದಿ

ಸದ್ದಿಲ್ಲದೆ ಜಿಮ್ ಟ್ರೇನರ್ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ

ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿರುವ ರಜಿನಿ ಅವರು, ಜಿಮ್ ಟ್ರೇನರ್ ಅರುಣ್ ಅವರೊಂದಿಗೆ ಸಾಕಷ್ಟು ರೀಲ್ಸ್ ಗಳನ್ನು ಮಾಡುತ್ತಿದ್ದರು.

ಸದ್ದಿಲ್ಲದೆ ಜಿಮ್ ಟ್ರೇನರ್ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ
ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಜಿನಿ.
Published On :

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಅಮೃತ ವರ್ಷಿಣಿ ಮೂಲಕ ನಟನೆಗೆ ಕಾಲಿಟ್ಟ ನಟಿ ರಜಿನಿ ಅವರು, ಜಿಮ್ ಟ್ರೇನರ್ ಅರುಣ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಕೆಲಸ ಮಾಡಿದ್ದು, ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಇಂದಿಗೂ ರಜಿನಿ ಅವರನ್ನು ಜನರು ಅಮೃತ ಎಂದೇ ಗುರುತಿಸುವುದುಂಟು.

ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿರುವ ರಜಿನಿ ಅವರು, ಜಿಮ್ ಟ್ರೇನರ್ ಅರುಣ್ ಅವರೊಂದಿಗೆ ಸಾಕಷ್ಟು ರೀಲ್ಸ್ ಗಳನ್ನು ಮಾಡುತ್ತಿದ್ದರು. ರೀಲ್ಸ್ ನೋಡಿದ ಅಭಿಮಾನಿಗಳು ಇಬ್ಬರು ಡೇಟಿಂಗ್ ನಲ್ಲಿದ್ದಾರೆಂದು ಹೇಳುತ್ತಿದ್ದರು, ಈ ಬಗ್ಗೆ ಹಲವು ಪ್ರಶ್ನೆಗಳನ್ನು ಮಾಡಿದ್ದರೂ, ರಜಿನಿಯವರು ನಿರಾಕರಿಸುತ್ತಲೇ ಬಂದಿದ್ದರು. ಆದರೆ, ಅಂತಿಮವಾಗಿ ಅರುಣ್ ಅವರೊಂದಿಗೆ ಸದ್ದಿಲ್ಲದೆ ಹಸೆಮಣೆ ಏರಿದ್ದಾರೆ.

ಇಂದು (ನವೆಂಬರ್ 10) ರಜಿನಿ ಹಾಗೂ ಅರುಣ್ ವಿವಾಹ ನೆರವೇರಿದೆ. ಕೇವಲ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಈ ಮದುವೆ ಶಾಸ್ತ್ರ ನಡೆದಿದೆ. ದಂಪತಿಗೆ ಎಲ್ಲರೂ ಶುಭ ಕೊರುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.