ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾದಲ್ಲಿ ಕಿಚ್ಚ ಸುದೀಪ್ ಹನುಮಂತನ ಪಾತ್ರ?
ರಾಜಮೌಳಿ ಅವರ 'ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಇದೀಗ ರೂ.1,300 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.

ಎಸ್.ಎಸ್. ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ಬಹು ಕೋಟಿ ವೆಚ್ಚದ ಬಹುನಿರೀಕ್ಷಿತ 'ವಾರಣಾಸಿ’ಯಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
'ಈಗ' ( (Eega) ಬಾಹುಬಲಿ ಬಳಿಕ ಇದೀಗ ವಾರಣಾಸಿ ಚಿತ್ರದಲ್ಲಿ ಹನುಮಂತನ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಂದಹಾಗೆ, ಈ ಚಿತ್ರದಲ್ಲಿ ಪ್ರಿನ್ಸ್ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರ್ ಪ್ರಮುಖ ಪಾತ್ರದಲ್ಲಿದ್ದಾರೆ.
ರಾಜಮೌಳಿ ಅವರ 'ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಇದೀಗ ರೂ.1,300 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸುದೀಪ್ ನಟನೆ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರಬಂದಿಲ್ಲ.
ಬಾಹುಬಲಿ ಬಳಿಕ ಇದೀಗ ವಾರಣಾಸಿ ಚಿತ್ರದಲ್ಲಿ ಹನುಮಂತನ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಂದಹಾಗೆ, ಈ ಚಿತ್ರದಲ್ಲಿ ಪ್ರಿನ್ಸ್ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರ್ ಪ್ರಮುಖ ಪಾತ್ರದಲ್ಲಿದ್ದಾರೆ.
ಪಾತ್ರದ ಪ್ರಾಮುಖ್ಯತೆಯನ್ನ ಪರಿಗಣಿಸಿ ಸುದೀಪ್ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದು ವೇಳೆ ಸುದೀಪ್ ಒಪ್ಪಿಕೊಂಡರೆ, ವಿಶ್ವವೇ ತಿರುಗಿ ನೋಡುವಂತೆ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ಚಿತ್ರದಲ್ಲಿ ಸುದೀಪ್ ಇರ್ತಾರೆ ಎಂಬುದು ಕನ್ನಡ ಹಾಗೂ ಕಿಚ್ಚನ ಅಭಿಮಾನಿಗಳಲ್ಲಿ ಸಾಕಷ್ಟು ಸಂತಸಕ್ಕೆ ಕಾರಣವಾಗಲಿದೆ.
ಅಂದಹಾಗೆ ರಾಜಮೌಳಿ ಸುದೀಪ್‌ಗೆ ನಿರ್ದೇಶಿಸಿದ್ದ `ಈಗ’ ಸಿನಿಮಾ ಟಾಲಿವುಡ್‌ನಲ್ಲಿ ಸೂಪರ್ ಹಿಟ್ ಚಿತ್ರವಾಗಿತ್ತು. ತದನಂತರ ರಾಜಮೌಳಿ ಅವರ ಬಾಹುಬಲಿ ಭಾಗ-1ರಲ್ಲಿ ಶೇಷ ಪಾತ್ರದಲ್ಲಿ ಸುದೀಪ್ ಅಭಿನಯಿಸಿದ್ದರು. ಬಾಹುಬಲಿ 2 ಚಿತ್ರದಲ್ಲಿ ಸುದೀಪ್ ಅಭಿನಯಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



