ಸಿನಿಮಾ ಸುದ್ದಿ

Box Office Collection: ಕೆಜಿಎಫ್ 2 ಗಿಂತ ಸ್ವಲ್ಪ ಹಿಂದುಳಿದ Kantara Chapter 1; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?

ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರವು ಹಿಂದಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಗಳಿಕೆ ಕಂಡ ಕನ್ನಡದ ಎರಡನೇ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.

Box Office Collection: ಕೆಜಿಎಫ್ 2 ಗಿಂತ ಸ್ವಲ್ಪ ಹಿಂದುಳಿದ Kantara Chapter 1; ರಿಷಭ್ ಶೆಟ್ಟಿ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಕಾಂತಾರ: ಚಾಪ್ಟರ್ 1 ಪೋಸ್ಟರ್
Published On :

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಭ್ ಶೆಟ್ಟಿ ಅವರ ಹಿಟ್ ಚಿತ್ರ 'ಕಾಂತಾರ'ದ ಪೂರ್ವಭಾಗವಾದ 'ಕಾಂತಾರ: ಚಾಪ್ಟರ್ 1' ಅದ್ಭುತ ಆರಂಭವನ್ನು ಕಂಡಿದೆ. ಬಿಡುಗಡೆಗೂ ಮುನ್ನವೇ ತೀವ್ರ ನಿರೀಕ್ಷೆ ಹುಟ್ಟುಹಾಕಿದ್ದ ಚಿತ್ರವು ಅಕ್ಟೋಬರ್ 2ರಂದು ದೇಶದಾದ್ಯಂತ ಬಿಡುಗಡೆ ಕಂಡಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿದೆ.

ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಈ ಚಿತ್ರವು ಎಲ್ಲ ಭಾಷೆಗಳಲ್ಲಿ ಬಿಡುಗಡೆಯಾದ ಮೊದಲನೇ ದಿನ 60 ಕೋಟಿ ರೂ. ಗಳಿಸಿದೆ. ಈ ಚಿತ್ರವು ಹಿಂದಿಯಲ್ಲಿ ಸುಮಾರು 19–21 ಕೋಟಿ ರೂ. ಗಳಿಸಿದೆ. ಇದು ಈ ವರ್ಷದ ಇದುವರೆಗಿನ ಅತಿದೊಡ್ಡ ಬಿಡುಗಡೆ ಎಂದು ಹೇಳಲಾಗುತ್ತಿದೆ.

ಈ ಕನ್ನಡ ಚಿತ್ರವು ಧರ್ಮ ಪ್ರೊಡಕ್ಷನ್ಸ್‌ನ ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ ಜೊತೆ ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನೀಡಿದೆ. ವರುಣ್ ಧವನ್, ಜಾನ್ವಿ ಕಪೂರ್, ರೋಹಿತ್ ಸರಾಫ್ ಮತ್ತು ಸಾನ್ಯಾ ಮಲ್ಹೋತ್ರಾ ನಟಿಸಿದ ಈ ಚಿತ್ರವು ಮೊದಲ ದಿನ 9.25 ಕೋಟಿ ರೂ.ಗಳನ್ನು ಗಳಿಸಿದೆ.

ರಿಷಬ್ ಶೆಟ್ಟಿ ಅಭಿನಯದ ಈ ಚಿತ್ರವು ಹಿಂದಿ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಗಳಿಕೆ ಕಂಡ ಕನ್ನಡದ ಎರಡನೇ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಈ ಮೂಲಕ 54 ಕೋಟಿ ರೂ. ನಿವ್ವಳ ಗಳಿಕೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್: ಚಾಪ್ಟರ್ 2 ನಂತರದ ಸ್ಥಾನ ಪಡೆದಿದೆ.

125 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಆರಂಭಿಕ ಗಳಿಕೆಯಲ್ಲಿ ಹೆಚ್ಚಿನ ಏರಿಕೆ ಕಂಡಿದೆ.

ಕಾಂತಾರ: ಚಾಪ್ಟರ್ 1 ಅನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ರಿಷಭ್ ಅವರೊಂದಿಗೆ ಅನಿರುದ್ಧ್ ಮಹೇಶ್ ಮತ್ತು ಶನಿಲ್ ಗೌತಮ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಜಯರಾಮ್, ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.