ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!
ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರು ವಿಜಯ್ ದೇವರಕೊಂಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.

ಗದ್ವಾಲ್: ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅವರ ಕಾರು ಸೋಮವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇಂದು ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಟ ವಿಜಯ್ ದೇವರಕೊಂಡ ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಯ ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರು ವಿಜಯ್ ದೇವರಕೊಂಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.
ಅಪಘಾತದ ನಂತರ, ನಟ ತನ್ನ ವಾಹನದಿಂದ ಇಳಿದು ಸ್ನೇಹಿತನ ಕಾರಿನಲ್ಲಿ ತೆರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



