'Bigg Boss' ಮನೆ ರೀಓಪನ್: ರೆಸಾರ್ಟ್ನಿಂದ 'ಜಾಲಿವುಡ್'ಗೆ ಮರಳಿದ ಸ್ಪರ್ಧಿಗಳು; ಆಟ ಮತ್ತೆ ಶುರು
ಅಧಿಕಾರಿಗಳು ಬೀಗ ತೆರೆದ ಹಿನ್ನೆಲೆಯಲ್ಲಿ ಎಲ್ಲಾ 17 ಮಂದಿ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಮರಳಿದ್ದು, ಆಟವನ್ನು ಮತ್ತೆ ಆರಂಭಿಸಿದ್ದಾರೆ.

ಬೆಂಗಳೂರು: ಸರ್ಕಾರದ ಸೂಚನೆ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋಕ್ಕೆ ಬೀಗವನ್ನು ಅಧಿಕಾರಿಗಳು ತೆರೆದಿದ್ದು, ಈ ಮೂಲಕ ಬಿಗ್ಬಾಸ್ ಶೋ ಪ್ರಾರಂಭಕ್ಕೆ ಅನುಮತಿ ನೀಡಿದ್ದಾರೆ.
ಅಧಿಕಾರಿಗಳು ಬೀಗ ತೆರೆದ ಹಿನ್ನೆಲೆಯಲ್ಲಿ ಎಲ್ಲಾ 17 ಮಂದಿ ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಮರಳಿದ್ದು, ಆಟವನ್ನು ಮತ್ತೆ ಆರಂಭಿಸಿದ್ದಾರೆ.
ಆಟ ನಿಲ್ಲಲ್ಲ: ಬಿಗ್ ಬಾಸ್
ಈ ನಡುವೆ ಕಲರ್ಸ್ ಕನ್ನಡ ವಾಹಿನಿಯು ಬಿಗ್ಬಾಸ್ ಇಂದಿನ ಎಪಿಸೋಡ್ನ ಮೊದಲ ಪ್ರೋಮೊ ಬಿಡುಗಡೆ ಮಾಡಿದ್ದು, ಬಿಗ್ಬಾಸ್ ಶೋ ಮುಂದುವರೆಯುತ್ತದೆ ಎಂದು ಹೇಳಿದೆ.
ಪ್ರೋಮೋದಲ್ಲಿ ಖಾಲಿ ಇರುವ ಬೆಡ್ ರೂಂ, ಕಿಚನ್, ಲಿವಿಂಗ್ ರೂಂ, ಹೊರಗಡೆಯ ಏರಿಯಾಗಳನ್ನು ತೋರಿಸಲಾಗಿದ್ದು, ಕೊನೆಯಲ್ಲಿ ‘ಎಂದಿನಂತೆ ಅದೇ ಸಮಯದಲ್ಲಿ, ಬಿಗ್ಬಾಸ್ ಕನ್ನಡ ರಾತ್ರಿ 9:30ಕ್ಕೆ ಪ್ರಸಾರ ಖಡಕ್ ಧ್ವನಿಯಲ್ಲಿ ತಿಳಿಸಲಾಗಿದೆ.
ಈ ಮೂಲಕ ಮನೆಯಲ್ಲಿ ಜನ ಇರಲಿ, ಇಲ್ಲದೇ ಇರಲಿ, ಬಿಗ್ಬಾಸ್ ಶೋ ಪ್ರಸಾರವಾಗುವುದು ಖಚಿತ ಎಂದು ತಿಳಿಸಿದೆ.
ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಪರಿಸರದ ನಿಯಮಗಳನ್ನು ಪಾಲಿಸಿರಲಿಲ್ಲ. ಹಾಗೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್‌ಗೆ ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ ಎನ್ನಲಾಗಿತ್ತು.
ಈ ಕಾರಣಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್ ಸ್ಟುಡಿಯೋವನ್ನು ಸೀಲ್ ಮಾಡಿದ್ದರು. ಹೀಗಾಗಿ ಅನಿವಾರ್ಯವಾಗಿ ಬಿಗ್ ಬಾಸ್ ಶೋ ಅನ್ನು ಸ್ಥಗಿತಗೊಳಸಬೇಕಾಯಿತು. ಈ ನಡುವೆ ಕಾರ್ಯಕ್ರಮ ಆರಂಭವಾಗುತ್ತಾ? ಇಲ್ಲವೇ? ಎಂಬ ಕುರಿತಂತೆಯೂ ಗೊಂದಲಗಳು ಮೂಡಿದ್ದವು.

Bigg Boss Kannada ರಿಯಾಲಿಟಿ ಶೋ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಡಿ.ಕೆ ಶಿವಕುಮಾರ್ಗೆ ಕಿಚ್ಚ ಸುದೀಪ್ ಧನ್ಯವಾದ!
ಈ ನಡುವೆ ಪ್ರತಿಕ್ರಿಯೆ ನೀಡಿದ್ದ ಡಿಕೆ.ಶಿವಕುಮಾರ್ ಅವರು, ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಜಾಲಿವುಡ್ ಸ್ಟುಡಿಯೋಸ್‌ಗೆ 'ಇದೊಂದು ಬಾರಿ ಅನುಮತಿ ನೀಡುವಂತೆ' ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಮ್ಮೆ ತಪ್ಪು ಸರಿ ಮಾಡಿಕೊಳ್ಳಲು ಅವಕಾಶ ಕೊಡಿ ಎಂದಿದ್ದೇನೆ. ಉದ್ಯೋಗ ಮುಖ್ಯ, ಏನೇ ಇದ್ದರೂ ಅವರಿಗೊಂದು ಅವಕಾಶ ಕೊಡಿ. ಅವರು ಸಮಸ್ಯೆ ಬಗೆಹರಿಸಿಕೊಳ್ಳಲಿ. ನಮ್ಮಲ್ಲಿ ಮನೋರಂಜನೆ ಕೂಡ ಮುಖ್ಯ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


