ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ
ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದರು.

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ (Raju Talikote) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣದ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ 'ಖಾಸ್ಗತೇಶ್ವರ' ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



