ಬೇಗ ಹೋಗು, ನನ್ನ ಉಳಿಸಿಕೊಡು: ರಾಜು ತಾಳಿಕೋಟೆಯ ಕೊನೆಯ 6 ನಿಮಿಷದ ಘಟನೆ ವಿವರಿಸಿದ Biggboss ವಿಜೇತ ಶೈನ್ ಶೆಟ್ಟಿ!
ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ಉಡುಪಿಯಲ್ಲಿ ಶೈನ್ ಶೆಟ್ಟಿ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ದುರಾದೃಷ್ಟವಶಾತ್ ಬದುಕುಳಿಯಲಿಲ್ಲ. ಇನ್ನು ಅಂದು ಏನಾಯ್ತು ಎಂಬುದನ್ನು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ವಿವರಿಸಿದ್ದಾರೆ. ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದ್ದಾರೆ.
ಬಿಗ್ ಬಾಸ್ ಸೀಸನ್ 7ರಲ್ಲಿ ನಾವು ಜೊತೆಗೆ ಭಾಗವಹಿಸಿದ್ದೇವು. ರಾಜು ತಾಳಿಕೋಟೆ ತುಂಬಾ ಹಸನ್ಮುಖಿ. ಎಲ್ಲರನ್ನು ಬಹಳ ಪ್ರೀತಿಸುವ ವ್ಯಕ್ತಿ. ಸಿನಿಮಾ ಮಾಡುವ ಅವಕಾಶ ಸಿಕ್ಕಾಗ ನಾನು ರಾಜು ಅವರನ್ನು ಸಂಪರ್ಕಿಸಿದೆ. ಅವರೂ ಸಂತೋಷದಿಂದ ಒಪ್ಪಿಕೊಂಡಿದ್ದರು. ರಾಜು ತಾಳಿಕೋಟೆಯವರಿಗೆ ಒಟ್ಟು 40 ದಿನದ ಶೆಡ್ಯೂಲ್ ಫಿಕ್ಸ್ ಆಗಿತ್ತು. ಹೆಬ್ರಿಯಲ್ಲಿ ಮೂರು ದಿನದ ಶೂಟಿಂಗ್ ಮುಗಿಸಿ ಉಡುಪಿಗೆ ಬಂದಿದ್ದೇವು.
ಬೆಳಗ್ಗೆ ಶೂಟಿಂಗ್ ಇದ್ದಿದ್ದರಿಂದ ಎಲ್ಲರೂ ಬೇಗ ಮಲಗಿದೇವು. ಆದರೆ 11:59ಕ್ಕೆ ಉಸಿರಾಟ ಸಮಸ್ಯೆ ಅಂತ ಫೋನ್ ಮಾಡಿದ್ದರು. ಪಕ್ಕದ ರೂಮ್ ನಲ್ಲೇ ಇದ್ದಿದ್ದರಿಂದ ನಾನು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದೆ. ಆದರೆ ಪ್ರಯೋಜನವಾಗಲಿಲ್ಲ ಎಂದು ಶೈನ್ ಶೆಟ್ಟಿ ಹೇಳಿದರು. ಕಾರಲ್ಲಿ ಆಸ್ಪತ್ರೆಗೆ ಹೋಗುವಾಗ ನನ್ನೊಂದಿಗೆ ರಾಜು ಅವರು ಮಾತನಾಡುತ್ತಿದ್ದರು. ಬೇಗ ಆಸ್ಪತ್ರೆಗೆ ಹೋಗು, ನನ್ನನ್ನು ಉಳಿಸಿಕೊಡು ಎನ್ನುತ್ತಿದ್ದರು ಎಂದು ಶೈನ್ ಶೆಟ್ಟಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



