ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?
ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು ಪಾವನಾ, ಉದ್ಯಮಿಯಾಗಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ.
ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು ಪಾವನಾ, ಉದ್ಯಮಿಯಾಗಿದ್ದಾರೆ. ಮೆಕಾನಿಕಲ್ ಇಂಜಿನಿಯರ್ ಎಂದು ಕೂಡ ತಮ್ಮ ಬಯೋದಲ್ಲಿ ಪಾವನಾ ಬರೆದುಕೊಂಡಿದ್ದಾರೆ.
ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆಯ ನಿಶ್ಚಯವಾಗಿದೆ. ನಿಶ್ಚಿತಾರ್ಥ ಹಾಗೂ ಮದುವೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಆದರೆ ಶೀಘ್ರದಲ್ಲೇ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದೆ ಎಂದು ಹೇಳಲಾಗುತ್ತಿದೆ.
ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದೆ. ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ. ಯುವತಿಗೆ ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾದಲ್ಲಿ ಚಿಕ್ಕಣ್ಣ ಮದುವೆ ಬಗ್ಗೆ ಗುಲ್ಲಾಗಿತ್ತು. ಬಳಿಕ ಅದೆಲ್ಲಾ ಸುಳ್ಳು ಎಂದು ಗೊತ್ತಾಗಿತ್ತು. ಕಳೆದ ವರ್ಷ 'ಉಪಾಧ್ಯಕ್ಷ' ಚಿತ್ರದ ಮೂಲಕ ಹೀರೊ ಆಗಿ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರು. ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



