'ಮಂಗಳಾಪುರಂ'ನಲ್ಲಿ ರಿಷಿಗೆ ಬಿಗ್ ಬಾಸ್ ಕನ್ನಡ ಖ್ಯಾತಿಯ ನಟಿ ಗೌತಮಿ ಜಾದವ್ ಜೋಡಿ!
ವಾರಾಹಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿದ್ವಾನ್ ಪ್ರಸನ್ನ ತಂತ್ರಿ ಮತ್ತು ರಾಮ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಹೆಸರು ಮಾಡಿದ ನಟ ರಿಷಿ, ತಮ್ಮ ಪಾತ್ರಗಳ ಆಯ್ಕೆಯಿಂದಲೇ ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ. ಈಗ ಅವರು ಮಂಗಳಾಪುರಂನ ಕುತೂಹಲಕಾರಿ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದೊಂದು ನಿಗೂಢ ಕರಾವಳಿ-ಪಟ್ಟಣದ ಕಥೆಯಾಗಿದ್ದು, ಇದರಲ್ಲಿ ದಿವಂಗತ ಕಾಶಿನಾಥ್ ಅವರ ಪುತ್ರ ಅಭಿಮನ್ಯು ಪ್ರಮುಖ ಪಾತ್ರದಲ್ಲಿದ್ದಾರೆ.
ಈ ಹಿಂದೆ ತುಳು ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ರಂಜಿತ್ ರಾಜ್ ಸುವರ್ಣ ಅವರು ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ವಾರಾಹಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿದ್ವಾನ್ ಪ್ರಸನ್ನ ತಂತ್ರಿ ಮತ್ತು ರಾಮ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಇತ್ತೀಚೆಗೆ ಮೂಡುಬಿದಿರೆಯಲ್ಲಿ ಅದ್ಧೂರಿ ಮುಹೂರ್ತ ಸಮಾರಂಭ ನಡೆದಿದ್ದು, ಇಡೀ ಚಿತ್ರತಂಡವೇ ಭಾಗವಹಿಸಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಚಿತ್ರೀಕರಣದ ಆರಂಭಕ್ಕೆ ಕ್ಲ್ಯಾಪ್ ಮಾಡಿದರು.
ಕಿರುತೆರೆ ಮತ್ತು ಬಿಗ್ ಬಾಕ್ ಕನ್ನಡದ ಮೂಲಕ ಮನೆಮಾತಾಗಿರುವ ನಟಿ ಗೌತಮಿ ಜಾದವ್ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನಟ ರಿಷಿಗೆ ಜೋಡಿಯಾಗಿ ಇದೀಗ ಚಿತ್ರರಂಗದಲ್ಲಿ ತಮ್ಮ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಗೌತಮಿ ಅವರ ಪತಿ ಅಭಿಷೇಕ್ ಕಾಸರಗೋಡು ಈ ಚಿತ್ರದ ಛಾಯಾಗ್ರಾಹಕರಾಗಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



