ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂಗೆ ಹಿರಿಯ ನಟಿಯರಾದ ಜಯಮಾಲ, ಶ್ರುತಿ, ಮಾಳವಿಕ ಮನವಿ
ಇತ್ತೀಚಿಗಷ್ಟೇ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದಾರಮ್ಯ ಅವರನ್ನು ಭೇಟಿ ಮಾಡಿ, ಸಾಹಸಸಿಂಹನಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು.

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮಂಗಳವಾರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ.
ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಅವರು ಮನವಿ ಮಾಡಿದರು ಎಂದು ಸಿಎಂ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದಾರಮ್ಯ ಅವರನ್ನು ಭೇಟಿ ಮಾಡಿ, ಸಾಹಸಸಿಂಹನಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



