ಸಿನಿಮಾ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ
ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ
Published On :

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದರು.

ನನ್ನ ಜೀವನದಲ್ಲಿ ಏನೂ ಇರಲಿಲ್ಲ ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಎಲ್ಲವೂ ದೈವಿಕ ತಾಯಿ ಮೂಕಾಂಬಿಕೆಯ ಕೃಪೆ ಮತ್ತು ಆಶೀರ್ವಾದದಿಂದ ನಡೆದಿದೆ ಎಂದರು. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಇಳಯರಾಜ ಅವರ ಮಗ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ ಮತ್ತು ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.