ಸಿನಿಮಾ ಸುದ್ದಿ

200 ರೂ ಏಕರೂಪ ಟಿಕೆಟ್ ದರ ಜಾರಿ: ಸಿನಿಮಾ ಪ್ರಿಯರಿಗೆ ಸಿಹಿಸುದ್ದಿ

ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ.

200 ರೂ ಏಕರೂಪ ಟಿಕೆಟ್ ದರ ಜಾರಿ: ಸಿನಿಮಾ ಪ್ರಿಯರಿಗೆ ಸಿಹಿಸುದ್ದಿ
Published On :

ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದು ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ ಪ್ರಿಯರಿಗೆ ಇದರಿಂದ ಕೊಂಚ ಸಮಾಧಾನವಾಗಿದೆ.

ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್​ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು.

ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ರಿಕ್ಲೈನ್ ಸೀಟ್​ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ. ಸದ್ಯ ಟಿಕೆಟ್ ಮಂದಿರಗಳಿಗೆ ಆದೇಶ ಪ್ರತಿ ತಲುಪಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.