ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್: ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?
ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ತುರ್ತು ಹಣ ಕಳುಹಿಸುವಂತೆ ಕೇಳಿದ್ದಾರೆ. ಇದನ್ನು ನಂಬಿ ಮೂರರಿಂದ ನಾಲ್ಕು ಮಂದಿ ಹಣ ಕಳುಹಿಸಿದ್ದಾರೆ. ನನ್ನ ಮಗ ಆಯೂಷ್ ಮತ್ತು ಪ್ರಿಯಾಂಕಾಳ ಇಬ್ಬರು ಸ್ನೇಹಿತರು ತಲಾ 55,000 ಸಾವಿರ ರೂಪಾಯಿ ಕಳುಹಿಸಿದ್ದಾರೆ. ನಮಗೆ ಬಂದಿರುವ ಮಾಹಿತಿಯ ಪ್ರಕಾರ ಸುಮಾರು 1.5 ರಿಂದ 2 ಲಕ್ಷ ರೂ. ಹೋಗಿದೆ. ಬೇರೆ ಯಾರಾದರೂ ಹಣ ಕಳುಹಿಸಿದ್ದಾರೆಯೇ ಎಂದು ನಾವು ಪರಿಶೀಲಿಸಬೇಕಾಗಿದೆ ಎಂದು ಉಪೇಂದ್ರ ಹೇಳಿದ್ದಾರೆ. ಹೀಗಾಗಿ ಅಂತಹ ಸಂದೇಶ ಬಂದ ಕೂಡಲೇ ಜನರು ಹಣ ಕಳುಹಿಸಬೇಡಿ. ಈ ಬಗ್ಗೆ ಪೊಲೀಸರಿಗೆ ತಿಳಿಸಬೇಕೆಂದು ಉಪೇಂದ್ರ ವಿನಂತಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದೇವೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಉಪೇಂದ್ರ, 'ಎಲ್ಲರಿಗೂ ನಮಸ್ಕಾರ.. ದಯವಿಟ್ಟು ಎಲ್ಲರಿಗೂ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ.
ಪ್ರಿಯಾಂಕಾ ಹಾಗೂ ನನ್ನ (ಉಪೇಂದ್ರ) ಮೊಬೈಲ್‌ನಿಂದ ಯಾರಾದರೂ ದುಡ್ಡು ಕಳುಹಿಸಿ ಎಂದು ಏನಾದರೂ ಸಂದೇಶ ಬಂದರೆ ದಯವಿಟ್ಟು ಕಳುಹಿಸೋದಕ್ಕೆ ಹೋಗಬೇಡಿ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ .ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ, ನಾವು ಈಗಲೇ ಪೊಲೀಸರಿಗೆ ದೂರು ಕೊಡಲು ಹೋಗುತ್ತಿದ್ದೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


