ಮೋಹನ್ ಲಾಲ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆದಿದ್ದು ಮಲಯಾಳಂ ಚಿತ್ರರಂಗದ ದಂತಕಥೆ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನವದೆಹಲಿ: 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆದಿದ್ದು ಮಲಯಾಳಂ ಚಿತ್ರರಂಗದ ದಂತಕಥೆ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಮೋಹನ್ ಲಾಲ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಬಂದಾಗ ಸಭಾಂಗಣದಲ್ಲಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು.
ಇದೇ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಶಾರುಖ್ ಖಾನ್ "ಜವಾನ್" ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು. ಇದು ಅವರ 33 ವರ್ಷಗಳ ಚಲನಚಿತ್ರ ವೃತ್ತಿಜೀವನದ ಒಂದು ಹೆಗ್ಗುರುತು ಕ್ಷಣವಾಗಿದೆ. ನಟ ಶಾರುಖ್ ಖಾನ್ ಹಾಗೂ 12th ಫೇಲ್ ಚಿತ್ರಕ್ಕೆ ವಿಕ್ರಾಂತ್ ಮಾಸ್ಸಿ ಇಬ್ಬರು ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರೆ, ಶ್ರೀಮತಿ ಚಟರ್ಜಿ vs ನಾರ್ವೆ ಚಿತ್ರದಲ್ಲಿನ ಮನಮೋಹಕ ಅಭಿನಯಕ್ಕಾಗಿ ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:
ಅತ್ಯುತ್ತಮ ನಿರ್ದೇಶಕ: ಸುದೀಪ್ತೋ ಸೇನ್ –The Kerala Story
ಅತ್ಯುತ್ತಮ ಚಲನಚಿತ್ರ: 12th Fail
ಭಾಷಾ ವಿಭಾಗದ ಅತ್ಯುತ್ತಮ ಕನ್ನಡ ಚಿತ್ರ: 'ಕಂದೀಲು–ದ ರೇ ಆಫ್ ಹೋಪ್'
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



