ರಾಜೇಶ್ ಧ್ರುವ ನಾಯಕನಾಗಿರುವ 'ಪೀಟರ್' ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್!
ಇದೇ ಹೊತ್ತಿನಲ್ಲಿ ಕುತೂಹಲ ಮೂಡಿಸಿರುವ ಮತ್ತೊಂದು ಸಿನಿಮಾ ಅಂದ್ರೆ ಅದು "ಪೀಟರ್". ಏಪ್ರಿಲ್ 10 ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.

ಲವ್ ಮಾಕ್ಟೇಲ್ ಬೆನ್ನಿಗೆ ಮತ್ತೊಂದು ಒಳ್ಳೆಯ ಕಂಟೆಂಟ್ ಪ್ರೇಕ್ಷಕರೆದುರಿಗೆ ಬರಲು ಸಿದ್ದವಾಗಿದೆ. ಕಳೆದ ಒಂದು ವಾರದಿಂದ ಚಿತ್ರರಂಗ ತುಂಬಾ ಲವಲವಿಕೆಯಿಂದ ಇದೆ. 'ಲವ್ ಮಾಕ್ಟೇಲ್ 3' ಮತ್ತು 'ಧುರಂಧರ 2' ಸಿನಿಮಾಗಳು ಥಿಯೇಟರ್ಗಳಲ್ಲಿ ಅದ್ಭುತವಾಗಿ ಪ್ರದರ್ಶನ ಕಾಣುತ್ತಿವೆ. ಇದೇ ಹೊತ್ತಿನಲ್ಲಿ ಕುತೂಹಲ ಮೂಡಿಸಿರುವ ಮತ್ತೊಂದು ಸಿನಿಮಾ ಅಂದ್ರೆ ಅದು "ಪೀಟರ್". ಏಪ್ರಿಲ್ 10 ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.
ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ (KVN Productions) ವಿತರಣೆ ಮಾಡುತ್ತಿದೆ. ಕೆವಿಎನ್ ಸಂಸ್ಥೆ ಕಂಟೆಂಟ್ ಇರುವ ಸಿನಿಮಾಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳುತ್ತದೆ ಎಂಬುದು ನಮಗೆಲ್ಲ ತಿಳಿದಿದೆ. ಅವರು ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ ಎಂದರೆ ಇದರಲ್ಲಿ ಏನೋ ವಿಶೇಷತೆ ಇರಲೇಬೇಕು.
ಈ ಹಿಂದೆ 'ದೂರದರ್ಶನ' ಎಂಬ ಉತ್ತಮ ಸಿನಿಮಾ ಮಾಡಿದ್ದ ಸುಕೇಶ್ ಶೆಟ್ಟಿ ಈ ಸಿನಿಮಾ ನಿರ್ದೇಶಿಸಿದ್ದು, ರವಿ ಹಿರೇಮಠ್ ಮತ್ತು ರಾಕೇಶ್ ಹೆಗಡೆ (ವೃದ್ಧಿ ಸ್ಟುಡಿಯೋಸ್) ನಿರ್ಮಾಣ ಮಾಡುತ್ತಿದೆ. ರವಿ ಹಿರೇಮಠ್ ಅವರು ನೂರಕ್ಕೂ ಹೆಚ್ಚು ಸಿನಿಮಾಗಳಿಗೆ ಸೌಂಡ್ ಡಿಸೈನರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಿತ್ವಿಕ್ ಮುರಳಿಧರ್ ಅವರ ಸಂಗೀತ ಈ ಸಿನಿಮಾಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.
ಅಜಯ್ ಗೊಗಾವಲೆ ಅವರು ಹಾಡಿರುವ ಜೋಶಿಕಿ ಜವಾನಿ ಫ್ರೆಂಡ್ ಶಿಪ್ ಸಾಂಗ್ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರತಿಮಾ ನಾಯಕ್ ಅವರು ಕಾಣಿಸಿಕೊಂಡಿರುವ ತಾಯಿ ತಾಯಿ ಹಾಡು ತುಂಬಾ ಎಮೋಷನಲ್ ಆಗಿದೆ ಮತ್ತು ಚಿತ್ರದ ಟ್ರಂಪ್ ಕಾರ್ಡ್ ಆಗುವ ಸಾಧ್ಯತೆ ಇದೆ.
ರಾಜೇಶ್ ಧ್ರುವ ನಾಯಕನಾಗಿ ಇವರ ಆಟಿಟ್ಯೂಡ್ ಮತ್ತು ಪ್ರೆಸೆನ್ಸ್ ತುಂಬಾ ಇಂಟರೆಸ್ಟಿಂಗ್ ಆಗಿದೆ. ರವೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಜಾನ್ವಿ ರಾಯಲ ಮತ್ತು ಇತರ ಹೊಸ ಪ್ರತಿಭೆಗಳು ಚಿತ್ರದಲ್ಲಿದ್ದಾರೆ.
ಪೀಟರ್' ಸಿನಿಮಾದಲ್ಲಿ ಸಸ್ಪೆನ್ಸ್, ಥ್ರಿಲ್ಲರ್, ಲವ್, ಎಮೋಷನ್ ಮತ್ತು ಫ್ರೆಂಡ್ ಶಿಪ್ ಹೀಗೆ ಎಂಟರ್ಟೈನ್ಮೆಂಟ್ ಗೆ ಬೇಕಾದ ಎಲ್ಲಾ ಎಲಿಮೆಂಟ್ಸ್ ಇವೆ. ಕರಾವಳಿ ಭಾಗದ ಮಣ್ಣಿನ ಸೊಗಡಿನ ಕಥೆ ಇದಾಗಿದ್ದು, ಏಪ್ರಿಲ್ 10 ರಂದು ತೆರೆಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



