ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ
ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು ಎಂದು ರಮ್ಯಾ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಗಳಗಳನೆ ಅತ್ತಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದರು.
ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು ಎಂದು ರಮ್ಯಾ ಹೇಳಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದು ಏಪ್ರಿಲ್ 16ರಂದು ಮುಂದಿನ ವಿಚಾರಣೆ ನಡೆಯಲಿದೆ.

ಕೌಟುಂಬಿಕ ಕಲಹಕ್ಕೆ ಅಮಾಯಕ ನಾಯಿ ಬಲಿ: ಸಾಕು ನಾಯಿಗೆ ಗುಂಡಿಟ್ಟು ಹತ್ಯೆ; ದೇವನಹಳ್ಳಿಯಲ್ಲಿ ಕ್ರೂರ ಕೃತ್ಯ..!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


