ವಿಚ್ಛೇದನದ ಬಗ್ಗೆ ತಮಾಷೆ: ಡಿಸಿಎಂ ಪವನ್ ಕಲ್ಯಾಣ್ ರನ್ನು ಗೇಲಿ ಮಾಡಿದ್ದ ಹಾಸ್ಯನಟನ ಬಂಧನ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಟಾಲಿವುಡ್ ನಟರ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಾದ ನಂತರ ಆಂಧ್ರಪ್ರದೇಶ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಟಾಲಿವುಡ್ ನಟರ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಾದ ನಂತರ ಆಂಧ್ರಪ್ರದೇಶ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಬಂಧಿಸಿದ್ದಾರೆ. ಬಿಎನ್‌ಎಸ್ ಮತ್ತು ಐಟಿ ಕಾಯ್ದೆಗಳ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಅನುದೀಪ್ ಆನ್‌ಲೈನ್ ಟ್ರೋಲಿಂಗ್ ಮತ್ತು ಬೆದರಿಕೆಗಳನ್ನು ಎದುರಿಸಿದ್ದಾರೆ.
ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ತಮ್ಮ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದಾಗ ಆತನನ್ನು ಬಂಧಿಸಲಾಗಿದೆ. ಇತ್ತೀಚೆಗೆ ಪೋಸ್ಟ್ ಮಾಡಿದ ಅವರ ಸ್ಟ್ಯಾಂಡ್-ಅಪ್ ಆಕ್ಟ್‌ನ ವೀಡಿಯೊದಲ್ಲಿ ಟಾಲಿವುಡ್ ನಟರು ಮತ್ತು ಅಭಿಮಾನಿಗಳ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ ನಂತರ ಅವರು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ನಿಂದನೆ ಮತ್ತು ದಾಳಿಯ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.
ವರದಿಗಳ ಪ್ರಕಾರ, ಏಪ್ರಿಲ್ 14ರಂದು ಸಂಜೆ 7 ಗಂಟೆ ಸುಮಾರಿಗೆ ಕಾಕಿನಾಡ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನುದೀಪ್ ಅವರ ಫೋನ್ ಪ್ರಯಾಗರಾಜ್‌ನಲ್ಲಿ ಟ್ರ್ಯಾಕ್ ಆಗಿತ್ತು. ಜನ ಸೇನಾ ಪಕ್ಷದ ಪೂರ್ವ ಗೋದಾವರಿ ಜಂಟಿ ಕಾರ್ಯದರ್ಶಿ ಬಡೇ ವೆಂಕಟ್ ಕೃಷ್ಣ ಅವರ ದೂರಿನ ಮೇರೆಗೆ, ಕಾಕಿನಾಡ ಮೊದಲ ಮುನ್ಸಿಪಲ್ ಪೊಲೀಸರು ಹಾಸ್ಯನಟನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಕಿನಾಡ ಪೊಲೀಸ್ ಠಾಣೆಯಲ್ಲಿ ಕಟಿಕಾಲ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಮೂರು ದಿನಗಳ ನಂತರ ಈ ಬಂಧನ ನಡೆದಿದೆ.
ಏತನ್ಮಧ್ಯೆ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರನ್ನು ಅಪಹಾಸ್ಯ ಮಾಡಿದ್ದ ಅನುದೀಪ್, ವಿಚ್ಛೇದನದ ವಿಷಯಕ್ಕೆ ಬಂದಾಗ ಜನರು ಪವನ್ ಕಲ್ಯಾಣ್ ಅವರಿಂದ ಕಲಿಯಬೇಕು. ಏಕೆಂದರೆ ಅವರ ಯಾವುದೇ ಪತ್ನಿಯರು ಅವರ ಮೇಲೆ ದುಷ್ಕೃತ್ಯದ ಆರೋಪ ಮಾಡಿಲ್ಲ ಎಂದು ಹೇಳಿದರು.
ಅನುದೀಪ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 356(2) (ಮಾನನಷ್ಟ), 353(2) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಸುಳ್ಳು ಮಾಹಿತಿ, ವದಂತಿಗಳು ಅಥವಾ ಪ್ರಚೋದನಕಾರಿ ಸುದ್ದಿಗಳನ್ನು ಹರಡುವುದು) ಮತ್ತು 79 (ಮಹಿಳೆಯ ಘನತೆಗೆ ಅವಮಾನ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಸಾರ್ವಜನಿಕ ಕ್ಷಮೆಯಾಚನೆಯ ಹೊರತಾಗಿಯೂ 30 ವರ್ಷದ ಅನುದೀಪ್ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



