ಸಿನಿಮಾ ಸುದ್ದಿ

ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?

ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ.

ವಿರಾಟ್ ಕೊಹ್ಲಿ, ಕತ್ರಿನಾ ಕೈಫ್ ಮನೆ ಪಕ್ಕದಲ್ಲೇ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ರೆಂಟ್ ಎಷ್ಟು ಗೊತ್ತಾ?
ನಟ ಅಲ್ಲು ಅರ್ಜುನ್
Published On :

ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಯಶಸ್ಸಿನ ನಂತರ ʻರಾಕಾʼ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

600 ಕೋಟಿ ರೂ.ಗಳಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ʻರಾಕಾʼ ಸಿನಿಮಾದ ಬಹುತೇಕ ಕೆಲಸಗಳು ಮುಂಬೈನಲ್ಲೇ ನಡೆಯುತ್ತಿವೆ. ಹೀಗಾಗಿ ಅಲ್ಲು ಅರ್ಜುನ್ ಅವರು ಈಗ ಮಾಯಾನಗರಿ ಮುಂಬೈಗೆ ಶಿಫ್ಟ್ ಆಗುತ್ತಿದ್ದಾರೆ.

ಮುಂಬೈನಲ್ಲಿ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ವಾಸಿಸುವ ಐಶಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಮನೆಯೊಂದನ್ನು ಅಲ್ಲು ಅರ್ಜುನ್ ಅವರು ಬಾಡಿಗೆ ಪಡೆದಿದ್ದಾರೆ.

ಅಲ್ಲು ಅರ್ಜುನ್ ಮುಂಬೈನ ಪ್ರತಿಷ್ಠಿತ ಏರಿಯಾನಲ್ಲಿ ಸೀ ಫೇಸ್ ಅಪಾರ್ಟ್​​ಮೆಂಟ್​​ನಲ್ಲಿ ಫ್ಲ್ಯಾಟ್ ಒಂದನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಹೈ-ಎಂಡ್ ಅಪಾರ್ಟ್‌ಮೆಂಟ್‌ಗಾಗಿ ಪ್ರತಿ ತಿಂಗಳು ಬರೋಬ್ಬರಿ 16 ಲಕ್ಷ ರೂಪಾಯಿ ಬಾಡಿಗೆ ಪಾವತಿಸಲಿದ್ದಾರೆ.

ಅಲ್ಲು ಅರ್ಜುನ್ ಅವರು ಪ್ರೈವೇಟ್ ಜೆಟ್‌ನಲ್ಲಿ ಓಡಾಡುತ್ತಾರೆ. ಅಷ್ಟೆಲ್ಲಾ ವೆಚ್ಚ ಭರಿಸಲು 'ರಾಕಾ' ಸಿನಿಮಾ ನಿರ್ಮಾಣ ಮಾಡುತ್ತಿರುವ ಸನ್ ಪಿಕ್ಚರ್ಸ್ ಸಂಸ್ಥೆ ಒಪ್ಪುತ್ತಿಲ್ಲ. ಅದೇ ಕಾರಣಕ್ಕೆ ಸಿನಿಮಾ ಚಿತ್ರೀಕರಣ ಮುಗಿಯುವರೆಗೂ ಅಲ್ಲು ಅರ್ಜುನ್ ಮುಂಬೈನಲ್ಲೇ ಐಶಾರಾಮಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ಮಗ ಮುಂಬೈಗೆ ಶಿಫ್ಟ್‌ ಆಗುವ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅಲ್ಲು ಅರ್ಜುನ್‌ ಅವರ ತಂದೆ, ನಿರ್ಮಾಪಕ ಅಲ್ಲು ಅರವಿಂದ್‌ ಅವರು, "ಖಂಡಿತವಾಗಿಯೂ ನನ್ನ ಮಗ ಎಲ್ಲಿಯೂ ಶಿಫ್ಟ್‌ ಆಗುತ್ತಿಲ್ಲ. ಪ್ರಸ್ತುತ ರಾಕಾ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿರುವುದರಿಂದ ಹಾಗೆ ಅನಿಸಿರಬಹುದು. ಆದರೆ ಅಲ್ಲು ಅರ್ಜುನ್ ಅವರ ಹೃದಯ ಮತ್ತು ಮನೆ ಇರುವ ಸ್ಥಳ ಹೈದರಾಬಾದ್. ಅವರ ಮಕ್ಕಳು ಇಲ್ಲಿಯೇ ಓದುತ್ತಿದ್ದಾರೆ, ಅಲ್ಲು ಅರ್ಜುನ್‌ ಅವರ ಎಲ್ಲಾ ಪ್ರೀತಿಪಾತ್ರರು ಹೈದರಾಬಾದ್‌ನಲ್ಲಿದ್ದಾರೆ. ಹೀಗಿರುವಾಗ ಅವರೇಕೆ ಮುಂಬೈಗೆ ಶಿಫ್ಟ್ ಆಗುತ್ತಾರೆ?" ಎಂದು ಪ್ರಶ್ನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.