ಮಲ್ಲಿ ಮಹಾ ಮೋಸಗಾರ, ನಂಬಿಕೆ ದ್ರೋಹಿ: ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ವಿರುದ್ಧ ದಿನಕರ್ ತೂಗುದೀಪ ಕೆಂಡ
ಇದೀಗ ದರ್ಶನ್ ಮಾಜಿ ಮ್ಯಾನೇಜರ್ ಬಗೆಗಿನ ಅನೇಕ ವಿಚಾರಗಳ ಬಗ್ಗೆ ದಿನಕರ್ ತೂಗುದೀಪ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಿರುವ ದಿನಕರ್ ತೂಗುದೀಪ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಬಹುಕಾಲದಿಂದ ಮರೆಯಾಗಿದ್ದ ಒಂದು ಹಳೆಯ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿತ್ತು . ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಲವು ವರ್ಷಗಳ ನಂತರ ಹಠಾತ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಅಷ್ಟೇ ಅಲ್ಲದೆ ಅಷ್ಟು ದಿನ ಮರೆಯಾಗಿದ್ದು ಏತಕ್ಕೆ? ಇಷ್ಟು ದಿನ ಎಲ್ಲಿದ್ದರು? ಇದರ ಜೊತೆಗೆ ದರ್ಶನ್ ಬಗೆಗಿನ ಅನೇಕ ವಿಚಾರಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು.
ಇದೀಗ ದರ್ಶನ್ ಮಾಜಿ ಮ್ಯಾನೇಜರ್ ಬಗೆಗಿನ ಅನೇಕ ವಿಚಾರಗಳ ಬಗ್ಗೆ ದಿನಕರ್ ತೂಗುದೀಪ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಪೋಸ್ಟ್ ಮಾಡಿರುವ ದಿನಕರ್ ತೂಗುದೀಪ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು,ಈತ ಫ್ರಾಡ್, ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿದ್ದಾರೆ ನನ್ನ ಹೆಸರನ್ನು, ದರ್ಶನ್ ರವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ.

ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ಆಯಿತು ಎಂದು ಹೇಳಿರುವುದಿಲ್ಲ. ಈತ ಮಹಾ ಮೋಸಗಾರ. ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ಅವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ.
ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು. ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು. ಇವನನ್ನು ಯಾರೂ ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ಅವರು ಯಾರೂ ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ.
ಈತ ಎಲ್ಲಾದರೂ ನಮ್ಮ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ. ದರ್ಶನ್ ಅವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗಬೇಡಿ. ಇಂತಿ ನಿಮ್ಮ, ದಿನಕರ್ ತೂಗುದೀಪ ಎಂದು ಅವರು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



