ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾ ಟೈಟಲ್ ರಿವೀಲ್!
ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್ ಒಡೆಯರ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹು ನಿರೀಕ್ಷಿತ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ನ್ನು ಅನಾವರಣ ಮಾಡಲಾಗಿದೆ.
ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆಯಲ್ಲಿ ಛತ್ರಿ ಹಿಡಿದು ಶಿವಣ್ಣ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.
ಈ ಮಹತ್ವಾಕಾಂಕ್ಷೆ ಪ್ರಾಜೆಕ್ಟ್ ನ್ನು ವೆಂಕಟ್ ಕೆ ನಾರಾಯಣ್ ಅವರು ತಮ್ಮದೇ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಪವನ್ ಶಿವಣ್ಣಗೆ ಆಕ್ಷನ್ ಕಟ್ ಹೇಳಬೇಕೆಂಬ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಪವನ್ ಒಡೆಯರ್, "ಇದು ನನಗೂ ಮತ್ತು ನಿರ್ಮಾಣ ಸಂಸ್ಥೆಗೂ ಅತ್ಯಂತ ವಿಶೇಷವಾದ ಸಿನಿಮಾವಾಗಲಿದೆ. ನಿಮಗಾಗಿ ನಾವು ಬಹಳಷ್ಟು ಕಾಯ್ದಿರಿಸಿದ್ದೇವೆ ಮತ್ತು ಶೀಘ್ರದಲ್ಲೇ ಟೀಸರ್ ಅನ್ನು ಘೋಷಿಸುತ್ತೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಕನಸು ನನಸಾಗಿದೆ. ಅವರು ದಶಕಗಳಿಂದ ಐಕಾನ್ ಆಗಿದ್ದಾರೆ ಮತ್ತು ಹಿಂದೆಂದೂ ಮಾಡದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ" ಎಂದರು.

ನಟ ಶಿವರಾಜ್ ಕುಮಾರ್ ಮದುವೆ ಆಗುವ ಆಸೆ... ಗಾಸಿಪ್ ಗೆ ತಮ್ಮದೇ ಸ್ಟೈಲ್ ನಲ್ಲಿ ಉತ್ತರ ಕೊಟ್ಟ ಸುಧಾರಾಣಿ; Video
'ಬೇಲ್' ನಮಗೆ ಬಹಳ ವಿಶೇಷವಾದ ಯೋಜನೆಯಾಗಿದ್ದು, ಪ್ರೇಕ್ಷಕರು ಇಲ್ಲಿಯವರೆಗೆ ನೋಡಿರದ ಹೊಸ ದೃಷ್ಟಿಕೋನದಲ್ಲಿ ಶಿವಣ್ಣ ಅವರನ್ನು ಪ್ರಸ್ತುತಪಡಿಸಲು ನಾವು ವಿಶೇಷವಾಗಿ ಎದುರು ನೋಡುತ್ತಿದ್ದೇವೆ' ವೆಂಕಟ್ ಕೆ ಕೊನಂಕಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


