ಲೇ ಮುಠಾಳ ಅರ್ಥ ಮಾಡ್ಕೋ, ಯೋಗತ್ಯೆ ಇದ್ದವರಿಗೆ ಎಲ್ಲವೂ ಸಿಗುತ್ತೆ: ಚೇತನ್ ಅಹಿಂಸಾ ವಿರುದ್ಧ ಸಾರಾ ಗೋವಿಂದ್ ಆಕ್ರೋಶ!
ವರನಟ ಡಾ. ರಾಜ್ಕುಮಾರ್ ಸ್ಮಾರಕದ ಬಗ್ಗೆ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಮಾಡಿದ್ದ ಪೋಸ್ಟ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳು, ರಾಜ್ಕುಮಾರ್ ಅಭಿಮಾನಿಗಳ ಸಂಘಗಳು ಚೇತನ್ ಅಹಿಂಸ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ

ವರನಟ ಡಾ. ರಾಜ್ಕುಮಾರ್ ಸ್ಮಾರಕದ ಬಗ್ಗೆ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಮಾಡಿದ್ದ ಪೋಸ್ಟ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳು, ರಾಜ್ಕುಮಾರ್ ಅಭಿಮಾನಿಗಳ ಸಂಘಗಳು ಚೇತನ್ ಅಹಿಂಸ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಈಗಾಗಲೇ ದೂರು ಸಹ ನೀಡಿವೆ. ಮತ್ತೊಂದೆಡೆ, ರಾಜ್ಕುಮಾರ್ ಸಂಘದ ಅಧ್ಯಕ್ಷರಾಗಿದ್ದ ಸಾರಾ ಗೋವಿಂದು ಅವರು ಈ ಬಗ್ಗೆ ಮಾತನಾಡಿದ್ದು, ಚೇತನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಡಾ. ರಾಜ್ಕುಮಾರ್ ಬಗ್ಗೆ ಆಗಲಿ, ಅವರ ಸಾಧನೆ, ಸೇವೆಯ ಬಗ್ಗೆ ಆತನಿಗೆ ಎಳ್ಳಷ್ಟೂ ಗೊತ್ತಿಲ್ಲ. ಸಾಮಾಜಿಕ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಅವನನ್ನು ಕೂಡಲೇ ಗಡಿಪಾರು ಮಾಡಬೇಕು. ಅವನು ರಾಜ್ಯದಲ್ಲೇ ಇದ್ದರೆ, ಅವನನ್ನು ಬದುಕಲು ಬಿಡಲ್ಲ. ಈ ಬಾರಿ ಜನ, ಅಭಿಮಾನಿಗಳು ಸುಮ್ಮನೆ ಬಿಡಲ್ಲ ಎಂದು ಸಾರಾ ಗೋವಿಂದು ಹೇಳಿದ್ದಾರೆ.
ಇನ್ನು ಕ್ಷಮೆ ಕೇಳುವುದಕ್ಕೂ ಸಹ ಅವನಿಗೆ ಯೋಗ್ಯತೆ ಇಲ್ಲ. ಹಾದಿ ಬೀದಿಯಲ್ಲಿ ಬೇಡಿಕೊಂಡು ತಿಂತಾನೇ? ನೀನು ಮೇರು ನಟರ ಬಗ್ಗೆ ಮಾತನಾಡುತ್ತೀಯ. ನಾವು ಸರ್ಕಾರದ ಮೇಲೆ ಒತ್ತಡ ಹಾಕುತ್ತೀವಿ, ಆತನನ್ನು ಈ ಕೂಡಲೇ ರಾಜ್ಯದಿಂದ ಹೊರಗೆ ಹಾಕಬೇಕು ಎಂದು ಹೇಳಿದರು. ಇಷ್ಟಕ್ಕೆ ಸುಮ್ಮನಾಗದ ಸಾರಾ ಗೋವಿಂದು ಕನ್ನಡ ಹೋರಾಟಗಾರರ ಜೊತೆ ಸೇರಿ ಚೇತನ್ ಅಹಿಂಸಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



