KD Movie 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.

ನವದೆಹಲಿ: ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ 'ಕೆಡಿ' ಸಿನಿಮಾದ ಹಾಡು 'ಸರ್ಸೆ ನಿನ್ನ ಸೆರಗ ಸರ್ಸೆ'ಯ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ಕೇಂದ್ರ ಸರ್ಕಾರ ಹಿಂದಿ ಆವೃತ್ತಿ 'ಸರ್ಕೆ ಚುನರ್ ತೇರಿ ಸರ್ಕೆ'ಯನ್ನು ಬ್ಯಾನ್ ಮಾಡಿದೆ.
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದು, ಇದರಿಂದ ಸಮಾಜಕ್ಕೆ "ಉದ್ದೇಶಪೂರ್ವಕವಲ್ಲದ" ಹಾನಿ ಉಂಟಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.
NCW ಅಧ್ಯಕ್ಷೆ ವಿಜಯ ರಹತ್ಕರ್ ನೇತೃತ್ವದಲ್ಲಿ ನಡೆದ ವಿಚಾರಣೆಯ ಸಮಯದಲ್ಲಿ, ಹಾಡಿನಲ್ಲಿ ಮಹಿಳೆಯರ ಬಗ್ಗೆ ಅಸಭ್ಯತೆ ಮತ್ತು ಅಶ್ಲೀಲ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಸರಿಪಡಿಸುವ ಕ್ರಮವಾಗಿ, ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದ ಪ್ರಯತ್ನಗಳ ಭಾಗವಾಗಿ 50 ಬುಡಕಟ್ಟು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸ್ಪಾನ್ಸರ್ ಮಾಡಲು ಸಂಜಯ್ ದತ್ ಬದ್ಧರಾಗಿದ್ದಾರೆ ಎಂದು NCW ಪ್ರಕಟಣೆಯಲ್ಲಿ ತಿಳಿಸಿದೆ.
ಅವರ ಮುಂದಿನ ಚಲನಚಿತ್ರಗಳು ಮತ್ತು ಸಂಬಂಧಿತ ಸೃಜನಶೀಲ ಯೋಜನೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಗೌರವಕ್ಕೆ ಧಕ್ಕೆಯಾಗದಂತೆ ಮತ್ತು ಸೂಕ್ತ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವುದಾಗಿ ಆಯೋಗಕ್ಕೆ ಭರವಸೆ ನೀಡಿದ್ದಾರೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ ಅವರು ವಿದೇಶದಲ್ಲಿ ಇರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಮತ್ತು ವಿಚಾರಣೆಗೆ ಹೊಸ ದಿನಾಂಕವನ್ನು ಕೋರಿದ್ದಾರೆ.
ನೋರಾ ಫತೇಹಿ ಮತ್ತು ಸಂಜಯ್ ದತ್ ಡ್ಯಾನ್ಸ್ ಮಾಡಿರುವ ಈ ಸಾಂಗ್ ಬಿಡುಗಡೆಯಾದ ಕೂಡಲೇ ವಿವಾದ ಭುಗಿಲೆದ್ದಿತು. ಹಾಡಿನಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಅಶ್ಲೀಲ ಸಾಹಿತ್ಯ ಮತ್ತು ದೃಶ್ಯಗಳಿವೆ ಎಂದು ಅನೇಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



