'ಮತ್ತೆ ಶುರು ಮಾಡೋಣವಾ...': BBK13 ಮೊದಲ ಪ್ರೋಮೊ ರಿಲೀಸ್; ಕಿಚ್ಚ ಸುದೀಪ್ ಡೈಲಾಗ್‌ಗೆ ಅಭಿಮಾನಿಗಳು ಫಿದಾ..!
ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ರೋಮೊದಲ್ಲಿ, ಕಪ್ಪು ಬಣ್ಣದ ಔಟ್‌ಫಿಟ್ ಹಾಗೂ ಕೂಲಿಂಗ್ ಗ್ಲಾಸ್‌ನಲ್ಲಿ ಕಂಗೊಳಿಸಿರುವ ಕಿಚ್ಚ ಸುದೀಪ್ ನೂರಾರು ಅಭಿಮಾನಿಗಳ ನಡುವೆ ಗ್ರ್ಯಾಂಡ್ ಎಂಟ್ರಿ ನೀಡುತ್ತಾರೆ.

ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್‌ಬಾಸ್ ಕನ್ನಡ ಸೀಸನ್ 13' ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಸಾರ ಆರಂಭವಾಗಲಿರುವ ಈ ಬಹುನಿರೀಕ್ಷಿತ ಕಾರ್ಯಕ್ರಮದ ಮೊದಲ ಪ್ರೋಮೊ ಬಿಡುಗಡೆಯಾಗಿದ್ದು, ಕಿಚ್ಚ ಸುದೀಪ್ ಅವರ ಸ್ಟೈಲಿಶ್ ಎಂಟ್ರಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಕಲರ್ಸ್ ಕನ್ನಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ (ಆಗಸ್ಟ್ 2) ಮೊದಲ ಪ್ರೋಮೊ ಬಿಡುಗಡೆ ಮಾಡಿದೆ.
ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ರೋಮೊದಲ್ಲಿ, ಕಪ್ಪು ಬಣ್ಣದ ಔಟ್‌ಫಿಟ್ ಹಾಗೂ ಕೂಲಿಂಗ್ ಗ್ಲಾಸ್‌ನಲ್ಲಿ ಕಂಗೊಳಿಸಿರುವ ಕಿಚ್ಚ ಸುದೀಪ್ ನೂರಾರು ಅಭಿಮಾನಿಗಳ ನಡುವೆ ಗ್ರ್ಯಾಂಡ್ ಎಂಟ್ರಿ ನೀಡುತ್ತಾರೆ.
ಪ್ರೋಮೊದಲ್ಲಿ ಮಾತನಾಡಿರುವ ಸುದೀಪ್, "ಕರ್ನಾಟಕದ ಜನ ಯಾರಿಗೂ ಕಾಯುವುದು ಇತಿಹಾಸದಲ್ಲೇ ಇಲ್ಲ. ಆದರೆ, ವರ್ಷಕ್ಕೊಮ್ಮೆ ಮಾತ್ರ ಕಾಯುತ್ತಾರೆ..." ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸುತ್ತಾರೆ.
ಬಳಿಕ "ಒಂದು ಮನೆ... ಒಂದು ಅವಕಾಶ... ಕೋಟಿ ಕನಸುಗಳು... ಮತ್ತೆ ಶುರು ಮಾಡೋಣವಾ?" ಎಂಬ ಡೈಲಾಗ್ ಮೂಲಕ ಬಿಗ್‌ಬಾಸ್ ಹೊಸ ಸೀಸನ್‌ಗೆ ಅದ್ಧೂರಿ ಚಾಲನೆ ನೀಡುವ ಸುಳಿವು ನೀಡಿದ್ದಾರೆ.
ಪ್ರೋಮೊ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಈ ಬಾರಿ ಬಿಗ್‌ಬಾಸ್ ಮನೆಗೆ ಯಾರು ಯಾರು ಸ್ಪರ್ಧಿಗಳಾಗಿ ಪ್ರವೇಶಿಸಲಿದ್ದಾರೆ ಎಂಬ ಚರ್ಚೆ ಜೋರಾಗಿದೆ.
ಸಿನಿಮಾ ನಟ-ನಟಿಯರು, ಕಿರುತೆರೆ ಕಲಾವಿದರು, ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆದ ಹಲವರ ಹೆಸರುಗಳು ಈಗಾಗಲೇ ಹರಿದಾಡುತ್ತಿವೆ. ಆದರೆ, ಸ್ಪರ್ಧಿಗಳ ಅಧಿಕೃತ ಪಟ್ಟಿಯನ್ನು ವಾಹಿನಿ ಇನ್ನೂ ಬಹಿರಂಗಪಡಿಸಿಲ್ಲ.
ಈ ಬಾರಿಯ ಸೀಸನ್‌ನ ಪ್ರಮುಖ ವಿಶೇಷವೆಂದರೆ ಸಾಮಾನ್ಯ ಜನರಿಗೂ ಬಿಗ್‌ಬಾಸ್ ಮನೆ ಪ್ರವೇಶಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಈ ಸೀಸನ್ ಇನ್ನಷ್ಟು ಕುತೂಹಲ ಮೂಡಿಸಿದ್ದು, ಅಂತಿಮವಾಗಿ ಯಾರೆಲ್ಲಾ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಲಿದ್ದಾರೆ ಎಂಬುದು ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿ ಅಧಿಕೃತವಾಗಿ ತಿಳಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



