ಸಿನಿಮಾ ಸುದ್ದಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಸಹ ಆಗಮಿಸಿದ್ದರು. ಟ್ರೈಲರ್ ನೋಡಿದ ಬಳಿಕ ಮಾತನಾಡಿದ ಶಿವಣ್ಣ, ಅದ್ಭುತವಾಗಿದೆ ಎಂದರು.

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್,  ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!
ಯಶ್, ಶಿವರಾಜ್ ಕುಮಾರ್
Published On :

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಸಹ ಆಗಮಿಸಿದ್ದರು. ಟ್ರೈಲರ್ ನೋಡಿದ ಬಳಿಕ ಮಾತನಾಡಿದ ಶಿವಣ್ಣ, ಅದ್ಭುತವಾಗಿದೆ ಎಂದರು. ಸಿನಿಮಾದಲ್ಲಿ It's Time I am Comming ಎಂದು ಯಶ್ ಡೈಲಾಗ್‌ ಹೇಳುತ್ತಾರೆಯೋ, ಅದೇ ರೀತಿ We Are All Waitnig ಎಂದು ಶಿವಣ್ಣ ಹೇಳಿದ್ದಾರೆ.

Toxic ಚಿತ್ರ ಬಿಡುಗಡೆಗಾಗಿ ನಾನೂ ಕಾಯುತ್ತಿದ್ದೇನೆ. ಯಶ್‌ ಈ ರೀತಿ ದೊಡ್ಡ ಮಟ್ಟಕ್ಕೆ ಬೆಳೆದಿರುವುದು, ಕನ್ನಡಿಗನಾಗಿ ಇಷ್ಟು ದೊಡ್ಡ ಮಟ್ಟದ ಸಿನಿಮಾ ಮಾಡಿರುವುದು ನಮ್ಮೆಲ್ಲರಿಗೂ ತುಂಬಾ ಹೆಮ್ಮೆ ಎನಿಸುತ್ತದೆ. ನಾನು, ನನ್ನ ತಮ್ಮನೇ ಸಿನಿಮಾ ಮಾಡಿದ್ದಾನೆ ಎನ್ನುವಷ್ಟು ಖುಷಿಯಾಗುತ್ತಿದೆ ಎಂದರು.

Toxic ಚಿತ್ರದ 4 ನಿಮಿಷ 38 ಸೆಕೆಂಡ್‌ಗಳ ಸುದೀರ್ಘ ಟ್ರೇಲರ್ ಬಿಡುಗಡೆಯಾಗಿದ್ದು, ಅದರಲ್ಲಿನ ‘ಇಟ್ಸ್ ಟೈಮ್- ಐ ಆಮ್ ಕಮಿಂಗ್’ (It’s Time- I’m Coming) ಎಂಬ ಪವರ್‌ಫುಲ್ ಮಾಸ್ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿದೆ. ಚಿತ್ರದಲ್ಲಿ ಹಿಂಸೆ ಮಿತಿಮೀರಿದಾಗ ನಾಯಕ ‘ಅವತಾರ ಎತ್ತುವಂತೆ’ ಮೂಡಿಬಂದಿರುವ ಈ ಸಾಲುಗಳು ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.