ಪ್ರದೋಷ್ ಮಾಫಿ ಸಾಕ್ಷಿ ದರ್ಶನ್‌ಗೆ ದೊಡ್ಡ ಕಂಟಕ: 'ದೇವರಿಗೆ ಗೊತ್ತು ಅಷ್ಟೇ ಸಾಕು' ಎಂದು ಪೋಸ್ಟ್ ಹಾಕಿದ ವಿಜಯಲಕ್ಷ್ಮಿ, ಕಾರಣವೇನು?
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಪ್ರಕರಣದ ಮತ್ತೋರ್ವ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ವಿರುದ್ಧ ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದು ಅಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಪ್ರಕರಣದ ಮತ್ತೋರ್ವ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ವಿರುದ್ಧ ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದು ಅಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ. ಈ ಮಧ್ಯೆ ದರ್ಶನ್ ಗಾಗಿ ಪತ್ನಿ ವಿಜಯಲಕ್ಷ್ಮೀ ಅಗತ್ಯ ಕಾನೂನು ನೆರವು ಸಿಗುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾವುದು ಕೈಗೂಡುತ್ತಿಲ್ಲ. ಹೀಗಾಗಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ ಕಾಮಾಕ್ಯ ದೇವರ ಚಿತ್ರಗಳನ್ನು ಹಂಚಿಕೊಂಡಿದ್ದು, ‘ದೇವರಿಗೆ ಗೊತ್ತು ಅಷ್ಟೆ ಸಾಕು’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಒಳ್ಳೆತನ, ವ್ಯಕ್ತಿತ್ವವನ್ನು ಯಾರಿಗೂ ತೋರಿಸುವ ಅಗತ್ಯವಿಲ್ಲ, ಅದು ದೇವರಿಗೆ ಗೊತ್ತಿದೆ ಅಷ್ಟೇ ಸಾಕು ಎಂದಿದ್ದಾರೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬಿರುಸಿನಿಂದ ಸಾಗುತ್ತಿದೆ. ಕೊಲೆ ಪ್ರಕರಣದ 14ನೇ ಆರೋಪಿ, ದರ್ಶನ್ ಆಪ್ತ ಪ್ರದೋಶ್, ತಮ್ಮನ್ನು ಮಾಫಿ ಸಾಕ್ಷಿ ಆಗಿ ಪರಿಗಣಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿರುವುದು ದರ್ಶನ್ ಸಂಕಷ್ಟಕ್ಕೆ ಸಿಲುವಂತೆ ಮಾಡಿದೆ.
ಪ್ರದೋಷ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ದರ್ಶನ್ ಆಕ್ಷೇಪಣೆ ಸಲ್ಲಿಸಿದ್ದರು. ಆದರೆ ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು 59ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಕೂಡ ಅವರಿಗೆ ಹಿನ್ನಡೆ ಆಗಿದೆ. ಪ್ರದೋಷ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ದರ್ಶನ್ ಪರ ವಕೀಲರಾದ ಹಷ್ಮತ್ ಪಾಷಾ ಅವರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಇಂದು ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



