ಸಿನಿಮಾ ಸುದ್ದಿ

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಕೋರ್ಟ್ ನಲ್ಲಿ ವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು.

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!
ವಿಜಯಲಕ್ಷ್ಮೀ ದರ್ಶನ್
Published On :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಕೋರ್ಟ್ ನಲ್ಲಿ ವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದು ಈ ವೇಳೆ ಅಭಿಮಾನಿಗಳು 'D Boss, D Boss' ಎಂದು ಜೈಕಾರ ಹಾಕಿದ್ದರು. ಇದಕ್ಕೆ ವಿಜಯಲಕ್ಷ್ಮಿ ಕೊಂಚ ಬೇಸರಗೊಂಡಿದ್ದು 'ಡಿ ಬಾಸ್' ಘೋಷಣೆ ಬೇಡ ಎಂದು ಅಭಿಮಾನಿಗಳಿಗೆ ತಿಳಿ ಹೇಳಿದ್ದಾರೆ.

ಎಲ್ಲೇ ಹೋದರೂ ನೀವು ಡಿ ಬಾಸ್.. ಡಿ ಬಾಸ್ ಅಂತ ಕೂಗುತ್ತಿದ್ದೀರಾ. ಎಲ್ಲಾ ಕಡೆ ಇದೇ ತೊಂದರೆ ಆಗ್ತಿರೋದು. ಇದನ್ನು ಮೊದಲು ನಿಲ್ಲಿಸಬೇಕು ಡಿ ಬಾಸ್ ಅನ್ನೋ ಘೋಷಣೆ ಬೇಡ ಎಂದು ನಗುತ್ತಲೇ ಆಕ್ಷೇಪ ವ್ಯಕ್ತಪಡಿಸಿ ಅಭಿಮಾನಿಗಳನ್ನು ಸುಮ್ಮನಾಗಿಸಿದ್ದಾರೆ.

ನಟ ದರ್ಶನ್‌ಗೆ ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಕೋರ್ಟ್ ನಲ್ಲಿ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದ್ದು, ಖುದ್ದು ಹಾಜರಿ ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೋರಿ ನಟ ದರ್ಶನ್ ಅವರು ಮನವಿ ಸಲ್ಲಿಸಿದ್ದರು. ಆದರೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಆರೋಪಿಗಳ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.